6

ಮೋಟೆಬೆನ್ನೂರು ಬಳಿ ಖಾಸಗಿ ಬಸ್ ಪಲ್ಟಿ!

ಬ್ಯಾಡಗಿ: ಮೋಟೆಬೆನ್ನೂರು ಬಳಿ ಖಾಸಗಿ ಬಸ್ ಪಲ್ಟಿ – ಹಲವರಿಗೆ ಗಂಭೀರ ಗಾಯ, ಮೂವರ ರಕ್ಷಣೆ

ಹಾವೇರಿ: ಬೆಂಗಳೂರಿನಿಂದ ಲಗ್ಗೆರೆ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿಯಾದ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ಸಮೀಪ ನಡೆದಿದೆ.

ಘಟನೆಯಲ್ಲಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರ ಕೈಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಇಬ್ಬರಿಂದ ನಾಲ್ವರು ಪ್ರಯಾಣಿಕರಿಗೆ ತೀವ್ರ ಸ್ವರೂಪದ ಗಾಯಗಳಾಗಿರುವ ಶಂಕೆ ವ್ಯಕ್ತವಾಗಿದೆ.

ಬಸ್ ಪಲ್ಟಿಯಾದ ಪರಿಣಾಮ ಮೂವರು ಪ್ರಯಾಣಿಕರು ಬಸ್ಸಿನೊಳಗೆ ಸಿಲುಕಿಕೊಂಡಿದ್ದರು. ಸ್ಥಳಕ್ಕೆ ಧಾವಿಸಿದ 108 ಆಂಬುಲೆನ್ಸ್ ಸಿಬ್ಬಂದಿ ಹರಸಾಹಸ ಪಟ್ಟು ಸಿಲುಕಿದ್ದ ಮೂವರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ.

ಗಾಯಾಳುಗಳಿಗೆ ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂದರ್ಭದಲ್ಲಿ ಗಾಯಾಳುಗಳ ಜೀವ ರಕ್ಷಣೆಗೆ ಅಪಘಾತದ ಸಂದರ್ಭದಲ್ಲಿ ಬಸ್ಸಿನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸುವಲ್ಲಿ ಆಂಬುಲೆನ್ಸ್ ಸಿಬ್ಬಂದಿ ಪ್ರಮುಖ ಪಾತ್ರ ವಹಿಸಿದ್ದಾರೆ.

ವರದಿ: ಶ್ರೀ ಕರ್ನಾಟಕ – ಹಾವೇರಿ ಜಿಲ್ಲಾ ಡಿಜಿಟಲ್ ಮೀಡಿಯಾ

Related Posts

CM ಆದ ಬಳಿಕ ಮೊದಲ ಬಾರಿ ಹಾವೇರಿಗೆ ಡಿಕೆಶಿ ಎಂಟ್ರಿ!

Share this… Facebook Pinterest Twitter Linkedin Whatsappಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಹಾವೇರಿಗೆ ಡಿಕೆ ಶಿವಕುಮಾರ್ ಭೇಟಿ: ನಾಳೆ ಕನಕದಾಸರ ಕಂಚಿನ ಮೂರ್ತಿ ಅನಾವರಣ ಹಾವೇರಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಹಾವೇರಿ…

ಭತ್ತದ ಹುಲ್ಲಿನ ಜೊತೆ ಟ್ರ್ಯಾಕ್ಟರ್ ಸುಟ್ಟು ಕರಕಲು

Share this… Facebook Pinterest Twitter Linkedin Whatsappವಿದ್ಯುತ್ ತಂತಿ ತಗುಲಿ ಭತ್ತದ ಹುಲ್ಲು ಸಮೇತ ಟ್ರ್ಯಾಕ್ಟರ್ ಸುಟ್ಟು ಭಸ್ಮ: ರೈತನಿಗೆ ₹6 ಲಕ್ಷ ನಷ್ಟ! ಹಾವೇರಿ: ರಸ್ತೆಯಲ್ಲಿ ಹಾದುಹೋಗುತ್ತಿದ್ದ ವಿದ್ಯುತ್ ತಂತಿ ತಗುಲಿ ಭತ್ತದ ಹುಲ್ಲು ಸಮೇತ ಟ್ರ್ಯಾಕ್ಟರ್ ಬೆಂಕಿಗಾಹುತಿಯಾದ…

You cannot copy content of this page