6

ಈ ಸರ್ಕಾರಿ ಶಾಲೆಗೆ ಶಿಕ್ಷಕರೇ ಇಲ್ಲ!

ಜೊಯಿಡಾದ ಅವುರ್ಲಿ ಹಿರಿಯ ಪ್ರಾಥಮಿಕ ಶಾಲೆಗೆ ಖಾಯಂ ಶಿಕ್ಷಕರೇ ಇಲ್ಲ. ಇರುವ ಒಬ್ಬ ಅತಿಥಿ ಶಿಕ್ಷಕರೇ 1ರಿಂದ 7ನೇ ತರಗತಿಯವರೆಗಿನ ಎಲ್ಲಾ ಮಕ್ಕಳಿಗೂ ಪಾಠ ಮಾಡುತ್ತಾರೆ!
ಪ್ರಸ್ತುತ 25 ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದಾರೆ. ಅವರಿಗೆ ಕಲಿಸುವ ಜೊತೆ ವಿವಿಧ ಗಣತಿ, ಮನೆ ಮನೆ ಭೇಟಿ, ಚುನಾವಣಾ ಕರ್ತವ್ಯ, ಜಾಗೃತಿ ಕಾರ್ಯಕ್ರಮಗಳ ಹೊಣೆಗಾರಿಕೆ ಸಹ ಆ ಅತಿಥಿ ಶಿಕ್ಷಕರ ಜವಾಬ್ದಾರಿ. ಶಾಲೆಗೆ ಸೂಕ್ತ ಶಿಕ್ಷಕರು ಬೇಕು ಎಂದು ಊರಿನವರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಹಿಡಿದು ಜಿಲ್ಲಾಧಿಕಾರಿವರೆಗೆ ಎಲ್ಲರಿಗೂ ಪತ್ರ ಬರೆದಿದ್ದಾರೆ. ಆದರೆ, ಆ ಪತ್ರ ಕಸದ ಬುಟ್ಟಿ ಸೇರಿದ ಅನುಮಾನ ಕಾಡುತ್ತಿದೆ. ಮುಖ್ಯಮಂತ್ರಿ, ಪ್ರಧಾನಿ ಕಚೇರಿಗೂ ಟ್ವೀಟ್ ಮಾಡುವ ಚಿಂತನೆಯಲ್ಲಿದ್ದಾರೆ. ಅದಕ್ಕೂ ಮುನ್ನ ಯಾವುದಕ್ಕೂ ಇರಲಿ ಎಂದು ಈ ಬಗ್ಗೆ ಇನ್ನೊಮ್ಮೆ ಮನವಿ ಸಲ್ಲಿಸಲು ಮಕ್ಕಳೇ ಶಿಕ್ಷಣಾಧಿಕಾರಿ ಕಚೇರಿಗೆ ಬಂದಿದ್ದರು. ಶಿಕ್ಷಣ ಹಾಗೂ ಆರೋಗ್ಯಕ್ಕೆ ಒತ್ತು ನೀಡುವುದಾಗಿ ಹೇಳುವ ಈ ಭಾಗದ ಶಾಸಕ ಆರ್ ವಿ ದೇಶಪಾಂಡೆ ಒಮ್ಮೆ ಅವುರ್ಲಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಸಮಸ್ಯೆ ಆಲಿಸಬೇಕು ಎಂಬುದು ಅಲ್ಲಿನವರ ಒತ್ತಾಸೆ.

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    Leave a Reply

    Your email address will not be published. Required fields are marked *

    You cannot copy content of this page