6

ಪ್ರಯಾಣಿಕರೇ, ಇಲ್ಲಿ ಗಮನಿಸಿ…

ಪ್ರಯಾಣಿಕರ ಬೇಡಿಕೆಯ ಮೇರೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಾರವಾರ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ರೈಲುಗಳನ್ನು ಸಂಚರಿಸುತ್ತಿದೆ.
ಜುಲೈ 26 ಮತ್ತು 28 ರಂದು ರೈಲು ಸಂಖ್ಯೆ 06567 ಎಸ್‌ಎಂವಿಟಿ ಬೆಂಗಳೂರು-ಕಾರವಾರ ವಿಶೇಷ ಎಕ್ಸ್ಪ್ರೆಸ್ ರೈಲು ಬೆಂಗಳೂರಿನಿoದ ರಾತ್ರಿ 12.30 ಗಂಟೆಗೆ ಹೊರಟು, ಅದೇ ದಿನ ಸಂಜೆ 4 ಗಂಟೆಗೆ ಕಾರವಾರ ನಿಲ್ದಾಣ ತಲುಪಲಿದೆ. ಪುನಃ ಇದೇ ರೈಲು (06568) ಜು. 26 ಮತ್ತು 28 ರಂದು ಕಾರವಾರ ನಿಲ್ದಾಣದಿಂದ ರಾತ್ರಿ 11:30 ಗಂಟೆಗೆ ಹೊರಟು, ಮರುದಿನ ಸಂಜೆ 3.30 ಗಂಟೆಗೆ ಎಸ್‌ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ.
ಈ ವಿಶೇಷ ರೈಲು ಬಾಣಸವಾಡಿ, ಚಿಕ್ಕಬಾಣಾವರ, ಕುಣಿಗಲ್, ಚನ್ನಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಮೂಕಾಂಬಿಕಾ ರೋಡ್ ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ ಮತ್ತು ಅಂಕೋಲಾ ನಿಲ್ದಾಣಗಳಲ್ಲಿ ನಿಲ್ಲಲಿದೆ.
ಈ ವಿಶೇಷ ರೈಲು ಎಸಿ-ಟು ಟೈಯರ್-2, ಎಸಿ-ತ್ರಿ ಟೈಯರ್-2, ಸ್ಲೀಪರ್ ಕ್ಲಾಸ್-6, ಸಾಮಾನ್ಯ ದ್ವಿತೀಯ ದರ್ಜೆ-6 ಮತ್ತು ಎಸ್‌ಎಲ್‌ಆರ್/ಡಿ -2 ಸೇರಿದಂತೆ 18 ಬೋಗಿಗಳು ಒಳಗೊಂಡಿದೆ.

 

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    Leave a Reply

    Your email address will not be published. Required fields are marked *

    You cannot copy content of this page