6

ಪತ್ರಕರ್ತನಿಗೆ ಪ್ರೇರಣೆಯಾದ ಪ್ರಧಾನಿ ಮಾತು: ದೇಶಭಕ್ತಿಯ ಕೃತಿಗೆ ಮೋದಿ ಮೆಚ್ಚುಗೆ!

ಪ್ರಧಾನಿ ನರೇಂದ್ರ ಮೋದಿ ಅವರ `ಮನ್ ಕಿ ಬಾತ್’ನಿಂದ ಪ್ರೇರಣೆಗೊಂಡ ಸಿದ್ದಾಪುರದ ಹಿರಿಯ ಪತ್ರಕರ್ತ ಕೆಕ್ಕಾರ್ ನಾಗರಾಜ ಭಟ್ಟ ಅವರು ಸ್ವಾತಂತ್ರ್ಯ ಸಂಗ್ರಾಮದ ಕುರಿತು ಕೃತಿ ರಚಿಸಿ ಅದನ್ನು ಪ್ರಧಾನಿ ಕಚೇರಿಗೆ ಕಳುಹಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಂದ ಅವರಿಗೆ ಅಭಿನಂದನಾ ಪತ್ರ ಬಂದಿದೆ.

ಸಿದ್ದಾಪುರದಲ್ಲಿ ನಡೆದ ಸ್ವಾತಂತ್ರ್ಯ ಸಂಗ್ರಾಮ ಕುರಿತಾಗಿ `ದಕ್ಷಿಣದ ಬಾರ್ಡೋಲಿ ಸಿದ್ದಾಪುರದ ಗಂಡುಗಲಿಗಳು’ ಎಂಬ ಪುಸ್ತಕವನ್ನು ಅವರು ಬರೆದಿದ್ದರು.  ಈ ಕೃತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ `ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಿದ್ದಾಪುರದ ಮಹತ್ವವನ್ನು ದಾಖಲಿಸುವ ಪುಸ್ತಕ ಬರೆದದಕ್ಕಾಗಿ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಶುಭಾಶಯಗಳು. ಪುಸ್ತಕದ ಪ್ರತಿಯನ್ನು ನನಗೆ ಕಳಿಸಿದ್ದಕ್ಕಾಗಿ ಧನ್ಯವಾದಗಳು. ಸ್ವಾತಂತ್ರ್ಯ ಚಳವಳಿಯಲ್ಲಿ ಸಿದ್ದಾಪುರದ ಸ್ವಾತಂತ್ರ್ಯ ಹೋರಾಟಗಾರರು ವಹಿಸಿರುವ ಪಾತ್ರವನ್ನು ದಾಖಲಿಸುವ ಈ ಉದಾತ್ತ ಪ್ರಯತ್ನ ನಿಜಕ್ಕೂ ಶ್ಲಾಘನೀಯ. ಇದು ಯುವ ಪೀಳಿಗೆಗೆ ರಾಷ್ಟ್ರದ ಪ್ರಗತಿಗಾಗಿ ಕೆಲಸ ಮಾಡಲು ಪ್ರೇರಣೆಯಾಗುತ್ತದೆ. 2047ರ ವೇಳೆಗೆ ವಿಕಸಿತ ಭಾರತವನ್ನು ಕಟ್ಟಲು ಸಹಕಾರಿಯಾಗುತ್ತದೆ’ ಎಂದು ಪ್ರಧಾನಿ ಮೆಚ್ಚುಗೆಯ ಮಾತುಗಳೊಂದಿಗೆ ಪತ್ರ ರವಾನಿಸಿದ್ದಾರೆ.

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    Leave a Reply

    Your email address will not be published. Required fields are marked *

    You cannot copy content of this page