6

ಹಳಿಬಿಟ್ಟು ಹಳ್ಳದ ಕಡೆ ವಾಲಿದ ರೈಲು

ಜೋಯಿಡಾ: ಕಲ್ಲಿದ್ದಲು ಸಾಗಿಸುತ್ತಿದ್ದ ರೈಲು ದೂದ್‌ಸಾಗರ್ ಜಲಪಾತದ ಅನತಿ ದೂರದಲ್ಲಿ ಹಳಿ ತಪ್ಪಿದ್ದು, ಈ ಮಾರ್ಗದ ರೈಲು ಸಂಚಾರ ಸ್ಥಗಿತಗೊಂಡಿದೆ.
ಸೋನಾಲಿo ನಡುವಿನ ಸುರಂಗ ಸಂಖ್ಯೆ 15ರ ಬಳಿ ಈ ದುರಂತ ನಡೆದಿದೆ. ತೋರಣಗಲ್ ಹೊಸಪೇಟೆಯಲ್ಲಿ ವಾಸ್ಕೋದಿಂದ ಜಿಂದಾಲ್ ಕಂಪನಿಗೆ ಕಲ್ಲಿದ್ದಲು ಸಾಗಿಸುವ ಸರಕು ರೈಲು ಇದಾಗಿದ್ದು, ದಬ್ಬೆ ಎಂಬ ಪ್ರದೇಶದ ಬಳಿ ಅವಘಡ ನಡೆದಿದೆ.
ಹೀಗಾಗಿ ಈ ಮಾರ್ಗದಲ್ಲಿ ಸಂಚರಿಸುವ ರೈಲು ಸಂಖ್ಯೆ 17309 ಯಶವಂತಪುರ ದಿಂದ ವಾಸ್ಕೋಡಿ ಹಾಗೂ 17310 ವಾಸ್ಕೋಡಿಯಿಂದ ಯಶವಂತಪುರಕ್ಕೆ ಹೋಗುವ ಎರಡು ರೈಲುಗಳ ಸಂಚಾರ ಸ್ಥಗಿತವವಾಗಿದೆ. ಜೊತೆಗೆ ಗೋವಾ ಎಕ್ಸ್ಪ್ರೆಸ್ ರೈಲು ಮಾರ್ಗ ಬದಲಾವಣೆ ಮಾಡಲಾಗಿದೆ.
ಹಳಿ ತಪ್ಪಿದ ಗೂಡ್ಸ್ ರೈಲನ್ನು ಮೇಲೆತ್ತುವ ಕಾರ್ಯ ನಡೆಯುತ್ತಿದೆ. ಜೊತೆಗೆ ಈ ಅವಘಡಕ್ಕೆ ಕಾರಣ ಏನು ಎಂಬ ಕುರಿತು ವಿಚಾರಣೆ ನಡೆದಿದೆ.

 

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    Leave a Reply

    Your email address will not be published. Required fields are marked *

    You cannot copy content of this page