6

ಶಿರೂರು ಸಂತ್ರಸ್ತರ ಹೋರಾಟಕ್ಕೆ ಮಾಜಿ ಪ್ರಧಾನಿ ಬೆಂಬಲ

ಅಂಕೋಲಾ: ಶಿರೂರಿನಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣದಲ್ಲಿ ಸಂತ್ರಸ್ತರಾದವರಿಗೆ ಸೂಕ್ತ ಪರಿಹಾರ ಮತ್ತು ಉದ್ಯೋಗ ನೀಡುವಂತೆ ಒತ್ತಾಯಿಸಿ ಶ್ರೀ ನಾರಾಯಣಗುರು ಶಕ್ತಿಪೀಠದ ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ದೆಹಲಿಯಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೆಗೌಡ ಅವರಿಗೆ ಮನವಿ ಸಲ್ಲಿಸಿದರು. ಸಂತ್ರಸ್ತ ಕುಟುಂಬಕ್ಕೆ ಅಗತ್ಯ ನೆರವು ನೀಡಲು ಹೋರಾಡುವುದಾಗಿ ಎಚ್ ಡಿ ದೇವೇಗೌಡ ಭರವಸೆ ನೀಡಿದರು.

`ಈ ದುರ್ಘಟನೆಯಲ್ಲಿ 8 ಜನರು ಮೃತರಾಗಿದ್ದು, ಇನ್ನು ಮೂವರು ನಾಪತ್ತೆಯಾಗಿದ್ದಾರೆ. ಐಆರ್‌ಬಿಯವರ ಅವೈಜ್ಞಾನಿಕ ಕಾಮಗಾರಿಯಿಂದ ಈ ದುರಂತ ಸಂಭವಿಸಿದೆ. ಉಳುವರೆ ಗ್ರಾಮದಲ್ಲಿ 6 ಮನೆಗಳು ಸಂಪೂರ್ಣ, 40 ಮನೆಗಳು ಭಾಗಶಃ ಹಾನಿ ಉಂಟಾಗಿವೆ. ಹೀಗಾಗಿ ಮೃತರ ಕುಟುಂಬಕ್ಕೆ 1 ಕೋಟಿ ರೂ ಪರಿಹಾರ ಹಾಗೂ ಕಂಪನಿಯಲ್ಲಿ ಉದ್ಯೋಗ ನೀಡುವಂತೆ ಪ್ರಣವಾನಂದ ಶ್ರೀಗಳು ಆಗ್ರಹಿಸಿದರು.

ಕೇಂದ್ರ ಸಾರಿಗೆ ಸಚಿವ ನಿತಿನ ಗಡ್ಕರಿ ಅವರೊಂದಿಗೆ ದೇವೆಗೌಡ ಕೂಡಲೇ ಮಾತನಾಡಿ ಬೇಡಿಕೆ ಈಡೇರಿಸುವಂತೆ ವಿನಂತಿಸಿದರು. ಈಡಿಗ ಮಹಾಮಂಡಳಿಯ ರಾಜ್ಯ ಯುವ ಘಟಕದ ಅಧ್ಯಕ್ಷ ಸಚಿನ ನಾಯ್ಕ ಹೊನ್ನಾವರ, ಕಲಬುರಗಿ ಜಿಲ್ಲೆಯ ಬಾಲರಾಜ ಗುತ್ತೆದಾರ ಸೇರಿದಂತೆ ಸಂತ್ರಸ್ತ ಕುಟುಂಬಸ್ಥರು ಉಪಸ್ಥಿತರಿದ್ದರು.

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    Leave a Reply

    Your email address will not be published. Required fields are marked *

    You cannot copy content of this page