6

Gokarna | ಗೋಕರ್ಣ ದೇಗುಲಕ್ಕೆ ನೂತನ ಸಮಿತಿ

ಗೋಕರ್ಣ ( Gokarna  ) ಮಹಾಬಲೇಶ್ವರ ದೇವಾಲಯ ಆಡಳಿತಕ್ಕೆ ಸಂಬ0ಧಿಸಿ ಸುಪ್ರೀಂ ಕೋರ್ಟಿನಲ್ಲಿನ ಆದೇಶದಂತೆ ಅಲ್ಲಿನ ಅಧ್ಯಕ್ಷರಿಗೆ ಪೂರ್ಣ ಪ್ರಮಾಣದ ಅಧಿಕಾರ ದೊರೆತಿದೆ. ಈ ಹಿನ್ನಲೆ ಅವರು ತಮ್ಮ ಹಕ್ಕು ಚಲಾಯಿಸಿ ನೂತನ ಆಡಳಿತ ಸಮಿತಿಗೆ ಸದಸ್ಯರ ಆಯ್ಕೆ ಮಾಡಿದ್ದಾರೆ.

ಉಪಾಧಿವಂತರಾದ ಗಣಪತಿ ಶಿವರಾಮ ಭಟ್ ಹಿರೇಭಟ್ಟ, ಸುಬ್ರಹ್ಮಣ್ಯ ಚಂದ್ರಶೇಖರ ಅಡಿ ಹಾಗೂ ಪರಿಣಿತ ವಿದ್ವಾಂಸ ಪರಮೇಶ್ವರ ಸುಬ್ರಹ್ಮಣ್ಯ ಪ್ರಸಾದ ರಮಣಿ ಮತ್ತು ಮಹೇಶ ಗಣೇಶ ಹಿರೇಗಂಗೆ ಅವರನ್ನು ಸದಸ್ಯರಾಗಿ ನೇಮಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಮಿತಿಗೆ ಈ ನಾಲ್ವರು ಸದಸ್ಯರನ್ನು ನೇಮಿಸಿದ್ದನ್ನು ಪ್ರಶ್ನಿಸಿ ರಾಮಚಂದ್ರಾಪುರ ಮಠ ಹೈಕೋಟ್‌ನಲ್ಲಿ ದಾವೆ ಹೂಡಿದ್ದು, ಇದಕ್ಕೆ ತಡೆಯಾಜ್ಞೆ ತಂದಿತ್ತು.

ಇದರಿಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕಗೊಂಡಿದ್ದ ನಾಲ್ವರು ಸಮಿತಿ ಸದಸ್ಯರಾಗಿ ಮುಂದುವರೆದಿದ್ದರು. ತಡೆಯಾಜ್ಞೆ ವಿರುದ್ಧ ಸರ್ಕಾರವು ಸುಪ್ರೀಂ ಕೋರ್ಟ ಮೊರೆ ಹೋಗಿದ್ದು, ವಿಚಾರಣೆ ನಡೆಸಿದ್ದ ನ್ಯಾಯಾಲಯವು ಜು.29ರಂದು ಸಮಿತಿ ಅಧ್ಯಕ್ಷ ಬಿ.ಎನ್.ಶ್ರೀಕೃಷ್ಣ ಅವರ ನೇತೃತ್ವದ ಹೊಸ ಸಮಿತಿಗೆ ಅಧಿಕಾರದಲ್ಲಿ ಮುಂದುವರೆಯಲು ನಿರ್ದೇಶನ ನೀಡಿತ್ತು. ಇದರ ಜೊತೆ ಹೊಸ ಸದಸ್ಯರನ್ನು ಸೇರಿಸಿಕೊಳ್ಳುವ ಜೊತೆಗೆ ಆಡಾಳಿತದಲ್ಲಿ ಯಾವುದೇ ನಿರ್ಧಾರ ಕೈಗೊಳ್ಳುವ ಹಕ್ಕನ್ನು ಅವರಿಗೆ ನೀಡಿತ್ತು.

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    Leave a Reply

    Your email address will not be published. Required fields are marked *

    You cannot copy content of this page