6

ಪ್ರಜಾಪ್ರಭುತ್ವದ ಅರಿವಿಗಾಗಿ ಮಾನವ ಸರಪಳಿ ರಚನೆ: ಅಧೀನ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹೇಳಿದ್ದೇನು?

ಕಾರವಾರ: ಸೆಪ್ಟಂಬರ್ 15ರಂದು `ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ ನಡೆಯಲಿದ್ದು ಉತ್ತರ ಕನ್ನಡ ಜಿಲ್ಲೆಯಲ್ಲಿ ಸಹ ಬೃಹತ್ ಪ್ರಮಾಣದ ಮಾನವ ಸರಪಳಿ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ. ಅರಣ್ಯ, ಗುಡ್ಡಗಾಡು ಹೊರತುಪಡಿಸಿ ಉಳಿದ ಪ್ರದೇಶದಲ್ಲಿ ಅಚ್ಚುಕಟ್ಟಾಗಿ ಮಾನವ ಸರಪಳಿ ಸೃಷ್ಠಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಅಧೀನ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸೋಮವಾರ ಸಭೆ ನಡೆಸಿದ ಅವರು `ಅರಣ್ಯ ಪ್ರದೇಶ ಮತ್ತು ಅಪಾಯಕಾರಿ ಗುಡ್ಡಕುಸಿತ ಪ್ರದೇಶಗಳ ವ್ಯಾಪ್ತಿಯನ್ನು ಹೊರತಪಡಿಸಿ ಇತರೆ ಮಾರ್ಗದಲ್ಲಿ ಮಾನವ ಸರಪಳಿ ರಚನೆ ಕುರಿತಂತೆ ಎಲ್ಲಾ ಹಂತದ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಈ ಕಾರ್ಯಕ್ರಮ ಯಶಸ್ಸಿಗೆ ಮುಖ್ಯವಾಗಿ ತಹಶೀಲ್ದಾರ್, ಶಿಕ್ಷಣ ಇಲಾಖೆ, ತಾಲೂಕು ಪಂಚಾಯತ ಹಾಗೂ ಪಿಡಿಓಗಳ ಜವಾಬ್ದಾರಿ ಹೆಚ್ಚಿದೆ’ ಎಂದವರು ಹೇಳಿದರು. `ಪ್ರಜಾಪ್ರಭುತ್ವದ ಮೂಲ ಉದ್ದೇಶದಂತೆ ಎಲ್ಲರನ್ನೂ ಒಳಗೊಳ್ಳುವ ರೀತಿಯಲ್ಲಿ, ಜಿಲ್ಲೆಯಲ್ಲಿನ ಎಲ್ಲಾ ಜನಪ್ರತಿನಿಧಿಗಳು, ಸಾರ್ವಜನಿಕರು, ಸಂಘ ಸಂಸ್ಥೆಗಳು, ಸ್ವ ಸಹಾಯ ಸಂಘಗಳು, ಜಿಲ್ಲೆಯ ಬುಡಕಟ್ಟು ಜನಾಂಗದವರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಎಲ್ಲಾ ಇಲಾಖೆಗಳ ನೌಕರರು ಸೇರಿ ಪ್ರತಿಯೊಬ್ಬರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು’ ಎಂದರು.

`ರಾಜ್ಯಾದ್ಯoತ ಏಕಕಾಲದಲ್ಲಿ ಅಂದರೆ, ಬೆಳಗ್ಗೆ 9 ಗಂಟೆಯಿoದ ಮಾನವ ಸರಪಳಿ ರಚನೆ ಕಾರ್ಯಕ್ರಮ ಶುರುವಾಗಲಿದೆ. ಈ ವೇಳೆ ಜಿಲ್ಲೆಯಾದ್ಯಂತ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರಿಂದ ಗಿಡ ನೆಡುವ ಕಾರ್ಯಕ್ರಮ ನಡೆಸಬೇಕು’ ಎಂದರು. `ಪೊಲೀಸರು ಅಗತ್ಯ ಭದ್ರತೆ ಒದಗಿಸಬೇಕು. ಆರೋಗ್ಯ ಇಲಾಖೆಯ ಮೂಲಕ ಆರೋಗ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದರು. ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    You cannot copy content of this page