6

ಅನ್ನ ಸಂತರ್ಪಣೆಗೆ ಇಲ್ಲ ಅಡ್ಡಿ: ಅಗ್ನಿ ಅವಘಡ ತಡೆದ ಗ್ರಾಮದೇವಿ!

ಯಲ್ಲಾಪುರ: ನವರಾತ್ರಿ ಹಿನ್ನಲೆ ಗ್ರಾಮದೇವಿ ಸನ್ನಿಧಿಯಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮಂಗಳವಾರ ಅಡುಗೆ ಮಾಡುತ್ತಿರುವಾಗ ಅಗ್ನಿ ಅವಘಡ ನಡೆದಿದೆ. ಸಂಘಟಕರು ಅಡುಗೆ ತಯಾರಿಕೆಗೆ ಬ್ಲಾಸ್ಟಪ್ರೂಪ್ ಗ್ಯಾಸ್ ಸಿಲೆಂಡರ್ ಬಳಕೆ ಮಾಡಿದ ಕಾರಣ ದೊಡ್ಡ ಅವಘಡ ನಡೆದಿಲ್ಲ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಸೇರಿ ಬೆಂಕಿ ಆರಿಸಿದ್ದು, ಅನ್ನ ಸಂತರ್ಪಣೆಗೆ ಕಾರ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ.

ಆಟೋ ಯೂನಿಯನ್ ಸೇರಿದಂತೆ ಹಲವು ಸಂಘಟನೆಗಳ ಸಹಯೋಗದಲ್ಲಿ ಅನ್ನ ಸಂತರ್ಪಣೆಯನ್ನು ಆಯೋಜಿಸಲಾಗಿತ್ತು. ಮಂಗಳವಾರ ಉತ್ತರ ಭಾರತದ ವಿಷ್ಣು ಸಮಾಜದವರು ಈ ಪುಣ್ಯ ಕೆಲಸದಲ್ಲಿ ಭಾಗಿಯಾಗಿದ್ದರು. ಸೋಮವಾರ ರಾತ್ರಿಯಿಂದಲೇ ಇದಕ್ಕೆ ಎಲ್ಲಾ ಬಗೆಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮಂಗಳವಾರ ಬೆಳಗ್ಗೆ ಅಡುಗೆ ತಯಾರಿ ಮಾಡುತ್ತಿರುವಾಗ ಗ್ಯಾಸ್ ಸಿಲೆಂಡರ್’ಗೆ ಬೆಂಕಿ ತಗುಲಿತು.

ಜ್ವಾಲೆ ಹೊತ್ತಿ ಉರಿಯುವ ಮುನ್ನವೇ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಅನಾಹುತ ತಡೆದರು. ಸಿಲೆಂಡರ್ ಹೊರಭಾಗ ಬೆಂಕಿ ಕಾಣಿಸಿಕೊಂಡಿದ್ದರಿAದ ಕೆಲವರು ಆತಂಕಕ್ಕೆ ಒಳಗಾಗಿದ್ದು, ಬ್ಲಾಸ್ಟಪ್ರೂಪ್ ಸಿಲೆಂಡರ್’ನ ವಿಷಯ ತಿಳಿದರು ನಿರಾಳರಾದರು. ಇದಾದ ನಂತರ ಅನ್ನ ಸಂತರ್ಪಣೆ ಕಾರ್ಯ ನಡೆದಿದ್ದು, ಸಾವಿರಾರು ಭಕ್ತರು ಪ್ರಸಾದ ಸ್ವೀಕರಿಸಿದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page