6

ಶರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ

ಹೊನ್ನಾವರ: ಸರ್ಕಾರಕ್ಕೆ ವಂಚಿಸಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರನ್ನು ನೋಡಿದ ಲಾರಿ ಚಾಲಕ ಹಾಗೂ ಮಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾರೆ.

ಅಕ್ಟೊಬರ್ 29ರ ರಾತ್ರಿ 12.20ಕ್ಕೆ ಶರಾವತಿ ನದಿಯಿಂದ ಅಕ್ರಮವಾಗಿ ಮರಳು ಸಾಗಾಟ ನಡೆಯುತ್ತಿತ್ತು. ಸರ್ಕಾರಕ್ಕೆ ರಾಜಧನ ಪಾವತಿಸದೇ ಸಾಗಾಟವಾಗುತ್ತಿರುವ ಬಗ್ಗೆ ಪೊಲೀಸರು ಮಾಹಿತಿ ಪಡೆದಿದ್ದು, ನೀಲಕೋಡು ಕ್ರಾಸಿನ ಬಳಿ ಲಾರಿಗೆ ಅಡ್ಡಲಾಗಿ ಕೈ ಮಾಡಿದರು.

ಈ ವೇಳೆ ಲಾರಿಯಲ್ಲಿ 9 ಸಾವಿರ ರೂ ಮೌಲ್ಯದ 3 ಬರಾಸ್ ಮರಳಿದ್ದು, ಲಾರಿ ಬಿಟ್ಟು ಅದರ ಚಾಲಕ ಹಾಗೂ ಮಾಲಕ ಪರಾರಿಯಾದರು. ಸರ್ಕಾರದ ಮರಳು ನೀತಿ ಉಲ್ಲಂಘಿಸಿ ಕಾನೂನುಬಾಹಿರ ಕೃತ್ಯ ಎಸಗಿದ ಕಾರಣ ಲಾರಿ ಚಾಲಕ ಹಾಗೂ ಮಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡರು. ಲಾರಿ ಜೊತೆ ಮರಳನ್ನು ವಶಕ್ಕೆ ಪಡೆದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page