6

ಬಡಿತ ನಿಲ್ಲಿಸಿದ ಮೃದು ಹೃದಯ | ಜಿಲ್ಲಾಧ್ಯಕ್ಷನನ್ನು ಕಳೆದುಕೊಂಡ ಶಿರಸಿ ಶಿಕ್ಷಕ ಸಂಘ

ಯಲ್ಲಾಪುರ: ನಿನ್ನೆ ಮೊನ್ನೆಯವರೆಗೂ ಆರೋಗ್ಯವಾಗಿದ್ದ ಶಿಕ್ಷಕ ನಾರಾಯಣ ನಾಯಕ ಬುಧವಾರ ದಿಢೀರ್ ಹೃದಯಘಾತದಿಂದ ಸಾವನಪ್ಪಿದ್ದಾರೆ.

ಎಲ್ಲರ ಜೊತೆ ಅನ್ಯೋನ್ಯವಾಗಿದ್ದ ನಾರಾಯಣ ನಾಯಕ ವಿವಿಧ ಹಂತದ ಅಧಿಕಾರಿಗಳ ಜೊತೆ ಒಡನಾಟ ಹೊಂದಿದ್ದರು. ಹೀಗಾಗಿ ಅವರು ಶಿಕ್ಷಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುತ್ತಿದ್ದರು. ಇದೇ ಕಾರಣದಿಂದ ಒಕ್ಕೂರಲಿನಿಂದ ಶಿಕ್ಷಕರು ಅವರನ್ನು ಬೆಂಬಲಿಸುತ್ತಿದ್ದರು. ನಾರಾಯಣ ನಾಯಕ ಅವರು ಶಿರಸಿ ಶೈಕ್ಷಣಿಕ ಜಿಲ್ಲೆಯ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷರಾಗಿದ್ದರು. ಈ ಸಂಘಕ್ಕೆ ಅವರು ಎರಡನೇ ಬಾರಿ ಅಧ್ಯಕ್ಷರಾಗಿದ್ದರು. 57 ವರ್ಷದ ಅವರು ಶಿಕ್ಷಕ ವೃತ್ತಿಯ ನಿವೃತ್ತಿ ಹಾಗೂ ಸಂಘದ ಅಧ್ಯಕ್ಷ ಅವಧಿ ಮುಕ್ತಾಯದ ಮುನ್ನವೇ ಕೊನೆ ಉಸಿರೆಳೆದರು.

ಹಿರೆಗುತ್ತಿಯವರಾದ ಅವರು 25 ವರ್ಷಗಳಿಗಿಂತಲೂ ಹೆಚ್ಚುಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. 1998ರಿಂದಲೂ ಅವರು ಯಲ್ಲಾಪುರದ ಬೀರಗದ್ದೆ-1 ಶಾಲೆಯಲ್ಲಿ ಸೇವೆಯಲ್ಲಿದ್ದರು. ಬುಧವಾರ ಯಲ್ಲಾಪುರದ ಸರ್ಕಾರಿ ನೌಕರರ ಭವನದ ಬಳಿ ಆಗಮಿಸಿದ್ದರು. ಅಲ್ಲಿ ಅವರಿಗೆ ಎದೆನೋವು ಕಾಣಿಸಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಅವರು ಸಾವನಪ್ಪಿದರು.

`ಎಲ್ಲಾ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಭಾಗಿಯಾಗುತ್ತಿದ್ದ ನಾರಾಯಣ ನಾಯಕರು ಶಿಕ್ಷಕರ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುತ್ತಿದ್ದರು’ ಎಂದು ಅನೇಕ ಶಿಕ್ಷಕರು ಸ್ಮರಿಸಿದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page