6

ಮೀನು ಹಿಡಿಯಲು ಹೋದವ ಮರಳಿದ್ದು ಶವವಾಗಿ!

ಕಾರವಾರ: ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿದ್ದ ಗಜಾನನ ಗೌಡ ಅವರ ಶವ ಸಿಕ್ಕಿದೆ.

ನ 1ರಂದು ಗಜಾನನ ಗೌಡ ಮೀನುಗಾರಿಕೆಗೆ ತೆರಳಿದ್ದರು. ರಾತ್ರಿಯಾದರೂ ಅವರು ಮನೆಗೆ ಮರಳಿರಲಿಲ್ಲ. ಸಾಕಷ್ಟು ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಶನಿವಾರ ಅವರ ಶವ ಲೇಡಿಸ್ ಕಡಲತೀರದಲ್ಲಿ ಪತ್ತೆಯಾಗಿದೆ. ಮೀನುಗಾರರು ಅಲ್ಲಿಗೆ ತೆರಳಿ ದೋಣಿ ಮೂಲಕ ಶವವನ್ನು ಬೈತಖೋಲ್’ಗೆ ತಂದಿದ್ದಾರೆ.

ಕಾಲು ಜಾರಿ ನೀರಿಗೆ ಬಿದ್ದ ಗಜಾನನ ಗೌಡ ಅವರನ್ನು ಕರಾವಳಿ ಕಾವಲು ಪಡೆಯವರು ಹುಡುಕಾಟ ನಡೆಸಿದ್ದರು. ಸ್ಥಳೀಯ ಮೀನುಗಾರರು ಸಹ ದೋಣಿ ಮೂಲಕ ಅವರ ಪತ್ತೆಗೆ ಪ್ರಯತ್ನಿಸಿದ್ದರು. ಆದರೆ, ನಿನ್ನೆ ಸಿಗದ ಅವರು ಸಾವಿನ ನಂತರ ಪತ್ತೆಯಾಗಿದ್ದಾರೆ.

ಮರಣೋತ್ತರ ಪರೀಕ್ಷೆ ನಡೆದ ನಂತರ ಪೊಲೀಸರು ಕುಟುಂಬದವರಿಗೆ ಶವ ಹಸ್ತಾಂತರಿಸಿದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page