6

ತೋಟದ ಬಾವಿಗೆ ಬಿದ್ದ ವ್ಯಸನಿ: ಮೂರು ದಿನದ ನಂತರ ಸಿಕ್ಕ ಶವ!

ದಾಂಡೇಲಿ: ಜೊಯಿಡಾದ ವಿರ್ನೋಲಿ ಬಳಿಯ ಸದಾನಂದ ಮೋಹನ ಧರಣಿ (35) ಬಾವಿಗೆ ಬಿದ್ದು ಸಾವನಪ್ಪಿದ್ದಾರೆ.

ಸರಾಯಿ ಕುಡಿಯುವ ಚಟಕ್ಕೆ ಅಂಟಿಕೊoಡಿದ್ದ ಅವರು ಈಚೆಗೆ ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದರು. ಜೀವನದಲ್ಲಿ ಜಿಗುಪ್ಸೆಗೆ ಒಳಗಾಗಿದ್ದರು. ನ 9ರಂದು ರಾಮಾ ಸದಾನಂದ ಧರಣಿ ಅವರ ತೋಟಕ್ಕೆ ಹೋಗಿದ್ದ ಅವರು ಅಲ್ಲಿದ್ದ ಬಾವಿಗೆ ಬಿದ್ದಿದ್ದಾರೆ.

ಎಷ್ಟು ಹೊತ್ತು ಕಳೆದರೂ ಮನೆಗೆ ಬಾರದ ಹಿನ್ನಲೆ ಅವರ ತಾಯಿ ಶಾಂತಿ ಧರಣಿ ಹುಡುಕಾಡಿದ್ದು, ಪತ್ತೆ ಆಗಿರಲಿಲ್ಲ. ನ 12ರಂದು ತೋಟದ ಬಾವಿಯಲ್ಲಿ ಶವ ಸಿಕ್ಕಿದೆ. ಈ ಬಗ್ಗೆ ಶಾಂತಿ ಅವರು ಪೊಲೀಸರಿಗೆ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page