6

ಮರಳುಗಾರಿಕೆಗಾಗಿ ನಡೆದ ಹೋರಾಟ: ಪೊಲೀಸರು – ಪ್ರತಿಭಟನಾಕಾರರ ನಡುವೆ ಮಾತಿನ ಕುಸ್ತಿ!

ಭಟ್ಕಳ: ಮರಳು ಸಮಸ್ಯೆ ವಿರುದ್ಧ ಸಿಡಿದೆದ್ದ ಕೂಲಿ ಕಾರ್ಮಿಕರು ಬುಧವಾರ ಭಟ್ಕಳದಲ್ಲಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ನೂಕುನುಕ್ಕಲು-ತಳ್ಳಾಟ ನಡೆದಿದ್ದು, ಪೊಲೀಸರು ಪರಿಸ್ಥಿತಿ ಕೈ ಮೀರದಂತೆ ನಿಯಂತ್ರಿಸಿದರು. `ತಮ್ಮ ಅಳಲು ಆಲಿಸಲು ಜಿಲ್ಲಾಧಿಕಾರಿ ಹಾಗೂ ಸಚಿವರು ಸ್ಥಳಕ್ಕೆ ಬರಬೇಕು’ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.

ಹಳೆ ಬಸ್ ನಿಲ್ದಾಣದ ಆಟೋ ಚಾಲಕರ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಮೈದಾನದಿಂದ ಮುಖ್ಯ ರಸ್ತೆ ಮಾರ್ಗವಾಗಿ ಸಂಶುದ್ದೀನ್ ಸರ್ಕಲ್ ಬಳಿ ಪ್ರತಿಭಟನೆ ತೆರಳಿತು. ಈ ವೇಳೆ ಕೆಲವರು ಸಚಿವರ ವಿರುದ್ದ ಘೋಷಣೆ ಕೂಗಿ ರಸ್ತೆ ತಡೆ ನಡೆಸಿದರು. ಇದಕ್ಕೆ ಪೊಲೀಸರು ಒಪ್ಪದಿದ್ದಾಗ ವಾಗ್ವಾದ ನಡೆಯಿತು. ತಾಲೂಕಾ ಆಡಳಿತ ಸೌಧದವರೆಗೆ ಪ್ರತಿಭಟನೆ ತೆರಳುವತನಕ ಹೀಗೆ 3-4 ಕಡೆ ಪೊಲೀಸರ ಜೊತೆ ಪ್ರತಿಭಟನಾಕಾರರು ಮಾತಿಗೆ ಮಾತು ಬೆಳೆಸಿದರು. ಮನವಿ ಸ್ವೀಕರಿಸಲು ಸಹಾಯಕ ಆಯುಕ್ತರು ಸ್ಥಳಕ್ಕೆ ಬಂದರೂ ಪ್ರತಿಭಟನಾಕಾರರು ಒಪ್ಪಲಿಲ್ಲ. ಜಿಲ್ಲಾಧಿಕಾರಿ ಆಗಮಿಸಿ ಮನವಿ ಆಲಿಸಬೇಕು ಎಂದು ಆಗ್ರಹಿಸಿದರು.

`ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಮರಳು ಅಗತ್ಯವಾಗಿದೆ. ಮರಳು ಸಿಗದ ಕಾರಣ ಯಾವ ಕಟ್ಟಡವೂ ನಿರ್ಮಾಣವಾಗುತ್ತಿಲ್ಲ. ಮರಳು ತೆಗೆಯುವ ಕಾರ್ಮಿಕರ ಜೊತೆ ಕಟ್ಟಡ ಕಾರ್ಮಿಕರು ಸಹ ಉದ್ಯೋಗವಿಲ್ಲದೇ ಸಮಸ್ಯೆ ಅನುಭವಿಸುತ್ತಿದ್ದಾರೆ’ ಎಂದು ಪ್ರತಿಭಟನಾಕಾರರು ಹೇಳಿದರು. `ಲಾರಿ ಮಾಲಕ-ಚಾಲಕ, ಗುತ್ತಿಗೆದಾರ ಸೇರಿ ಅನೇಕರು ಈ ಸಮಸ್ಯೆಯಿಂದ ನೊಂದಿದ್ದಾರೆ’ ಎಂದು ವಿವರಿಸಿದರು.

`ನೆರೆ ಜಿಲ್ಲೆಯಲ್ಲಿ ಮರಳುಗಾರಿಕೆಗೆ ಅನುಮತಿಯಿದೆ. ಇಲ್ಲಿ ಮಾತ್ರ ಅನುಮತಿ ಸಿಗುತ್ತಿಲ್ಲ’ ಎಂದು ಅಸಮಧಾನ ವ್ಯಕ್ತಪಡಿಸಿದರು.

  • Related Posts

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    You cannot copy content of this page