6

ಮಕ್ಕಳ ದಿನ | ಅಂಗನವಾಡಿ ಕೇಂದ್ರದಲ್ಲಿ ಪೋಕ್ಸೋ ಜಾಗೃತಿ

ಕುಮಟಾ: ಮಾಸೂರು ಕ್ರಾಸ್ ಜನತಾ ಫ್ಲೋಟಿನ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಚಾರಣೆ ಅಂಗವಾಗಿ ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಮೂಡಿಸಲಾಯಿತು.

`ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಸಾಕಷ್ಟು ಕಾನೂನುಗಳಿವೆ. ಅದರಲ್ಲಿಯೂ ಮುಖ್ಯವಾಗಿ ಈಚೆಗೆ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ. ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಪೋಕ್ಸೋ ಕಾಯ್ದೆ ಪ್ರಬಲ ಆಯುಧವಾಗಿದ್ದು, ಆ ಬಗ್ಗೆ ಪ್ರತಿಯೊಬ್ಬರು ಅರಿವು ಹೊಂದಿರಬೇಕು’ ಎಂದು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗಸ್ ಹೇಳಿದರು.

`ದೇಶಕಂಡ ಉತ್ತಮ ಪ್ರಧಾನಿ ಜವಾಹಾರ ನೆಹರು ಅವರು ಮಕ್ಕಳ ಬಗ್ಗೆ ಅಪಾರ ಪ್ರೀತಿ ಹೊಂದಿದ್ದರು. ಮಕ್ಕಳ ಉತ್ತಮ ಭವಿಷ್ಯ ರಚನೆಗೆ ಒತ್ತು ನೀಡುವುದರಿಂದ ಮಕ್ಕಳ ದಿನಾಚರಣೆ ಆಚರಿಸಲಾಗುತ್ತದೆ’ ಎಂದು ಸಾಮಾಜಿಕ ಕಾರ್ಯಕರ್ತ ಸುಧಾಕರ ನಾಯ್ಕ ಹೇಳಿದರು. ಅಂಗನವಾಡಿ ಶಿಕ್ಷಕಿ ಸುರೇಖಾ ನಾಯ್ಕ ಹಾಗೂ ಮಕ್ಕಳ ಪಾಲಕರು ಇದ್ದರು.

  • Related Posts

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    You cannot copy content of this page