6

ಕಾರ್ಯಕರ್ತನನ್ನು ಕಳೆದುಕೊಂಡ ಆರ್‌ಎಸ್‌ಎಸ್: ಸಹದ್ಯೋಗಿಯನ್ನು ಕಳೆದುಕೊಂಡ ಪತ್ರಕರ್ತರು..

ಕಾರವಾರ: ಮಾಜಿ ಸಂಸದ ಅನಂತಕುಮಾರ ಹೆಗಡೆ ಅವರ ಅಪ್ಪಟ ಅಭಿಮಾನಿ, ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾಗಿದ್ದ ಗಜಾ ಸೂರಂಗೇಕರ್ ಗುರುವಾರ ನಿಧನರಾದರು.

ಆರ್‌ಎಸ್‌ಎಸ್ ಕಾರ್ಯಕರ್ತರಾಗಿದ್ದ ಗಜಾ ಸೂರಂಗೇಕರ್ ಬಿಜೆಪಿಯಲ್ಲಿ ಸಕ್ರಿಯರಾಗಿದ್ದರು. ಸ್ವಂತ ದೋಣಿಯನ್ನು ಹೊಂದಿದ್ದ ಅವರು ಮೀನುಗಾರಿಕೆಯನ್ನು ಮಾಡುತ್ತಿದ್ದರು. ಜಿಲ್ಲಾಕೇಂದ್ರ ಕಾರವಾರದಲ್ಲಿ ಅವರು ಪತ್ರಕರ್ತರಾಗಿಯೂ ಸೇವೆ ಸಲ್ಲಿಸಿದ್ದರು. ಆಕಾಶವಾಣಿ ಕೇಂದ್ರದಲ್ಲಿ ಉದ್ಘೋಷಕರಾಗಿ ಕಾರ್ಯ ನಿರ್ವಹಿಸಿದ್ದರು.

ಮೂರು ವರ್ಷಗಳ ಹಿಂದೆ ದೀರ್ಘಕಾಲೀನ ಕಾಯಿಲೆಗೆ ತುತ್ತಾಗಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಹೀಗಾಗಿ ಎಲ್ಲಾ ಚಟುವಟಿಕೆಗಳಿಂದ ದೂರವುಳಿದು ವಿಶ್ರಾಂತಿಯಲ್ಲಿದ್ದರು. ಕೆಲ ದಿನಗಳ ಹಿಂದೆ ಅವರನ್ನು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ.

ಮಾಜಿ ಶಾಸಕ ಗಂಗಾಧರ ಭಟ್ಟ, ಮಾಜಿ ಶಾಸಕಿ ರೂಪಾಲಿ ನಾಯ್ಕ, ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಸೇರಿ ಅನೇಕರು ಗಜಾ ಸೂರಂಗೇಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page