6

ಈ ಸರ್ಕಾರಿ ಶಾಲೆ ಇನ್ನಷ್ಟು ಸ್ಮಾರ್ಟ: ಮಕ್ಕಳ ಕಲಿಕೆಗೆ ಇಂಟರ್‌ನೆಟ್ ಸೇವೆ!

ಯಲ್ಲಾಪುರ: ತಾಲೂಕಿನ ಸವಣಗೇರಿ ಶಾಲೆಗೆ ದಾನಿಗಳ ನೆರವಿನಿಂದ ಇಂಟರ್‌ನೆಟ್ ಸೇವೆ ಒದಗಿಸಲಾಗಿದೆ. ನಾನಾ ಭಾಗದ ಸಂಪನ್ಮೂಲ ವ್ಯಕ್ತಿಗಳು ಆನ್‌ಲೈನ್ ಮೂಲಕ ಮಕ್ಕಳಿಗೆ ಪಾಠ ಮಾಡಲು ಈ ವ್ಯವಸ್ಥೆ ಸಹಕಾರಿಯಾಗಲಿದೆ.

`ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳಸುವಿಕೆ, ಗಣಿತದ ಪ್ರಾತ್ಯಕ್ಷಿಕೆ, ವಿಜ್ಞಾನ ಪಾಠ ಹಾಗೂ ಮಾದರಿಗಳ ಬಗ್ಗೆ ಸ್ಪಷ್ಠತೆ ಮೂಡಿಸಲು ತಂತ್ರಜ್ಞಾನ ಸಹಕಾರಿಯಾಗಿದೆ’ ಎಂದು ಶಾಲೆಯ ಮುಖ್ಯ ಶಿಕ್ಷಕ ಸಂಜೀವಕುಮಾರ ಹೊಸ್ಕೇರಿ ಅಭಿಪ್ರಾಯಪಟ್ಟರು.

`ಪಠ್ಯಕ್ರಮದ ಜೊತೆ ಹಾಡು, ನೃತ್ಯ ಮೊದಲಾದ ವಿಷಯಗಳ ಬಗ್ಗೆಯೂ ಇಂಟರ್‌ನೆಟ್ ನೆರವಿನಿಂದ ಮಕ್ಕಳಿಗೆ ತರಬೇತಿ ನೀಡಲಾಗುತ್ತದೆ. ಭಾಷಾ ಉಚ್ಚಾರ, ಆನ್‌ಲೈನ್ ಮೂಲಕ ಶಿಕ್ಷಣ ನೀಡುವಿಕೆಗೂ ಇದು ಸಹಕಾರಿ’ ಎಂದು ಅವರು ವಿವರಿಸಿದರು. ಗ್ರಾಮದ ವೆಂಕಟ್ರಮಣ ಎಂ ಹೆಗಡೆ ಅವರು ಶಾಲೆಗೆ ಇಂಟರ್‌ನೆಟ್ ಸಂಪರ್ಕ ಒದಗಿಸಿಕೊಟ್ಟಿದ್ದಾರೆ. ಸವಣಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಶ್ರೀಪಾದ ಹೆಗಡೆ ಹಾಗೂ ಆಡಳಿತ ಮಂಡಳಿಯವರು ಪ್ರತಿ ತಿಂಗಳ ವೆಚ್ಚವನ್ನು ಭರಿಸುವ ಭರವಸೆ ನೀಡಿದ್ದಾರೆ.

ತಾಲೂಕಿನ ಕೆಲವೇ ಕೆಲವು ಪ್ರಾಥಮಿಕ ಶಾಲೆಯಲ್ಲಿ ಇಂಟರ್‌ನೆಟ್ ಸೇವೆಯಿದೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page