6

ಕಾಸು ಉಳಿಸಲು ಅಡ್ಡದಾರಿ ಹಿಡಿದ ಐಆರ್‌ಬಿ: ನೂರಾರು ಜನರ ಪ್ರತಿಭಟನೆ

ಭಟ್ಕಳ: ಅಂಡರ್‌ಪಾಸ್ ನಿರ್ಮಿಸದೇ ರಾಷ್ಟ್ರೀಯ ಹೆದ್ದಾರಿ ಅಗಲೀಕರನ ನಡೆಸುತ್ತಿರುವ ಐಆರ್‌ಬಿ ಕಂಪನಿ ವಿರುದ್ಧ ಭಟ್ಕಳದ ಜನ ಪ್ರತಿಭಟನೆ ನಡೆಸಿದ್ದಾರೆ. ಕೈಕಿಣಿ ಗ್ರಾಪಂ ಬಸ್ತಿ ವ್ಯಾಪ್ತಿಯಲ್ಲಿ ಅಂಡರ್‌ಪಾಸ್ ನಿರ್ಮಾಣಕ್ಕಾಗಿ ಆ ಭಾಗದವರು ಬುಧವಾರ ಪಟ್ಟುಹಿಡಿದರು.

ಬೆಳಗ್ಗೆ ಬಸ್ತಿ ಉತ್ತರಕೊಪ್ಪ ಕ್ರಾಸ್‌ನಲ್ಲಿ ಜಮಾಯಿಸಿದ ಜನ ಕಾಮಗಾರಿ ನಡೆಸಲು ಅಡ್ಡಿಪಡಿಸಿದರು. `ರೈತರು ತಮ್ಮ ಭೂಮಿಗೆ ತೆರಳಲು ನಿತ್ಯ ಈ ಹೆದ್ದಾರಿ ದಾಟಬೇಕು. ಆಗ ಅಪಘಾತದ ಸಾಧ್ಯತೆ ಹೆಚ್ಚಿದ್ದು, ಇದನ್ನು ತಪ್ಪಿಸಲು ಅಂಡರ್ ಪಾಸ್ ಅಗತ್ಯ’ ಎಂದು ಪ್ರತಿಪಾಧಿಸಿದರು.

`ಶಾಲೆ, ಸ್ಮಶಾನಕ್ಕೆ ತೆರಳಲು ಬೇರೆ ದಾರಿಯಿಲ್ಲ. ಈ ಭಾಗದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಕಳೆದ 7-8 ವರ್ಷಗಳಿಂದ ಅಂಡರ್ ಪಾಸ್ ನಿರ್ಮಿಸುವಂತೆ ಆಗ್ರಹಿಸಲಾಗುತ್ತಿದೆ. ಆದರೆ, ಯಾರೂ ಸ್ಥಳೀಯರ ಮಾತು ಆಲಿಸಿಲ್ಲ’ ಎಂದು ಆಕ್ರೋಶವ್ಯಕ್ತಪಡಿಸಿದರು. `ಯಾವುದೇ ಕಾರಣಕ್ಕೂ ಅಂಡರ್ ಪಾಸ್ ಇಲ್ಲದೇ ಹೆದ್ದಾರಿ ಅಗಲೀಕರಣ ಕಾಮಗಾರಿ ಮುಂದುವರೆಸಲು ಬಿಡುವುದಿಲ್ಲ’ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.

ಜನರ ಆಕ್ರೋಶದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶಿವಕುಮಾರ, `ಅಂಡರ್‌ಪಾಸ್ ನಿರ್ಮಾಣವನ್ನು ಮುಂದಿನ ಹಂತದಲ್ಲಿ ಖಂಡಿತವಾಗಿ ತೆಗೆದುಕೊಳ್ಳಲಾಗುವುದು’ ಎಂಬ ಭರವಸೆ ನೀಡಿದರು. ಆದರೆ, ಇದಕ್ಕೆ ಪ್ರತಿಭಟನಾಕಾರರು ಒಪ್ಪಲಿಲ್ಲ.

ಸಹಾಯಕ ಆಯುಕ್ತೆ ಡಾ.ನಯನಾ, ತಹಸೀಲ್ದಾರ ಅಶೋಕ ಭಟ್ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಬೇಡಿಕೆಯನ್ನು ಆಲಿಸಿದರು. `ಆಗಲೂ ಐಆರ್‌ಬಿ ಕಂಪನಿ ಮೇಲೆ ವಿಶ್ವಾಸವಿಲ್ಲ’ ಎಂದು ಅಲ್ಲಿದ್ದವರು ಹೇಳಿದರು. `ಈ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಾಗುವುದು’ ಎಂದು ಅಧಿಕಾರಿಗಳು ಹೇಳಿದರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page