6

ವಿದ್ಯುತ್ ಬಿಲ್ ದುಬಾರಿ: ಸರ್ಕಾರಿ ಕಟ್ಟಡಗಳಿಗೆ ಸೋಲಾರ್ ಮೇಲ್ಚಾವಣಿ!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲ್ಚಾವಣಿ ಮೇಲೆ ಸೋಲಾರ್ ಘಟಕ ಸ್ಥಾಪಿಸುವ ಬಗ್ಗೆ ಜಿಲ್ಲಾಡಳಿತ ಚಿಂತನೆ ನಡೆಸಿದೆ. ಈ ಬಗ್ಗೆ ಎಲ್ಲಾ ಇಲಾಖೆಯ ಅಧಿಕಾರಿಗಳು ತಕ್ಷಣದಿಂದಲೇ ಕಾರ್ಯೊನ್ಮುಖರಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಸಾಜೀದ್ ಅಹಮದ್ ಮುಲ್ಲಾ ಸೂಚಿಸಿದ್ದಾರೆ.

ವಿವಿಧ ಸರ್ಕಾರಿ ಕಚೇರಿ ವಿದ್ಯುತ್ ಬಾಕಿ ಹಿನ್ನಲೆ ಹೆಸ್ಕಾಂ ಜಿಲ್ಲೆಯ ಹಲವು ಕಚೇರಿಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಿತ್ತು. ಕುಮಟಾ ಮಿನಿವಿಧಾನಸೌಧ, ಯಲ್ಲಾಪುರದ ಇಂದಿರಾ ಕ್ಯಾಂಟೀನ್, ಭಟ್ಕಳದ ಕೆಲ ಇಲಾಖೆಗಳಿಗೆ ಸಹ ವಿದ್ಯುತ್ ಬಿಲ್ ಬಿಸಿ ತಾಗಿತ್ತು.

ಪ್ರಸ್ತುತ ಅಧೀನ ಅಧಿಕಾರಿಗಳ ಸಭೆ ನಡೆಸಿದ ಅಪರ ಜಿಲ್ಲಾಧಿಕಾರಿ `ಸಾಂಪ್ರದಾಯಿಕ ವಿದ್ಯುತ್ ಮೂಲಗಳು ಕಾಲಕ್ರಮೇಣ ನಶಿಸಲಿದ್ದು, ಸೂರ್ಯಶಕ್ತಿಯಿಂದ ದೊರೆಯುವ ವಿದ್ಯುತ್’ಗೆ ಯಾವುದೇ ಮೊತ್ತವನ್ನು ಪಾವತಿಸಬೇಕಾಗಿಲ್ಲ. ಆದ್ದರಿಂದ ವಿದ್ಯುತ್ ಸ್ವಾವಲಂಬನೆ ಸಾಧಿಸುವ ಉದ್ದೇಶದಿಂದ ಜಿಲ್ಲೆಯ ಸರಕಾರಿ ಕಚೇರಿಗಳು ಸಾರ್ವಜನಿಕರಿಗೆ ಮಾದರಿಯಾಗಿ ತಮ್ಮ ಕಟ್ಟಡಗಳ ಮೇಲ್ಚಾವಣಿಯಲ್ಲಿ ಸೋಲಾರ್ ಘಟಕಗಳನ್ನು ಅಳವಡಿಸಬೇಕು’ ಎಂದರು. ಈ ಬಗ್ಗೆ 15 ದಿನಗಳ ಒಳಗೆ ವರದಿ ಸಲ್ಲಿಸುವಂತೆಯೂ ಅವರು ಸೂಚಿಸಿದರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page