6

ಕೋಟಿ ವೆಚ್ಚದ ಕಟ್ಟಡದ ಲಿಪ್ಟ್ ಹಾಳು!

ಕುಮಟಾ: ಕಳೆದ ವರ್ಷ ಬಹುಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ತಹಶೀಲ್ದಾರ್ ಕಚೇರಿಯಲ್ಲಿ ಲಿಪ್ಟ್ ವ್ಯವಸ್ಥೆ ಸರಿಯಾಗಿಲ್ಲ. ಕಳೆದ ಒಂದು ತಿಂಗಳಿನಿ0ದ ಇಲ್ಲಿನ ಲಿಪ್ಟ್ ಕೆಲಸ ಮಾಡುತ್ತಿಲ್ಲ.

ಸೋಮವಾರ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗ್ಸ್ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಸುಧಾಕರ ನಾಯ್ಕ, ಮಂಜುನಾಥ್ ಕಾಗಲ್ ಇದನ್ನು ಗಮನಿಸಿ ಅಲ್ಲಿದ್ದವರನ್ನು ಪ್ರಶ್ನಿಸಿದ್ದಾರೆ. `ಲಿಪ್ಟ್ ಹಾಳಾದ ಕಾರಣ ಅಂಗವಿಕಲರು ಹಾಗೂ ವೃದ್ಧರು ಸಮಸ್ಯೆ ಅನುಭವಿಸುತ್ತಿದ್ದಾರೆ. ಅವರಿಗೆ ಮೆಟ್ಟಿಲು ಹತ್ತಿ ಮೇಲಿನ ಮಹಡಿಗೆ ತೆರಳಲು ಸಾಧ್ಯವಾಗುತ್ತಿಲ್ಲ’ ಎಂದವರು ವಿವರಿಸಿದ್ದಾರೆ.

`ಈ ಕಚೇರಿಯಲ್ಲಿ ತಹಶೀಲ್ದಾರ್ ಆಗಿ ಆಗಮಿಸಲು ಯಾರೂ ಆಸಕ್ತಿವಹಿಸುತ್ತಿಲ್ಲ. ಅಧಿಕಾರ ಸ್ವೀಕರಿಸಿದ ಕೆಲವೇ ದಿನದಲ್ಲಿ ವರ್ಗವಾಗುತ್ತಿದ್ದು, ಜನ ಸಾಮಾನ್ಯರ ಕೆಲಸಗಳಿಗೆ ತೊಂದರೆಯಾಗಿದೆ’ ಎಂದವರು ದೂರಿದರು. `ತಹಶೀಲ್ದಾರ್ ಕಚೇರಿ ಸಮಸ್ಯೆಗಳ ಬಗ್ಗೆ ಉಪವಿಭಾಗಾಧಿಕಾರಿಗಳಿಗೆ ತಿಳಿಸಲು ಕರೆ ಮಾಡಿದರೂ ಅವರು ಸಂಪರ್ಕಕ್ಕೆ ಸಿಗಲಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರಾದರೂ ಇಲ್ಲಿನ ಸಮಸ್ಯೆಗೆ ಪರಿಹಾರ ಕೊಡಬೇಕು’ ಎಂದವರು ಆಗ್ರಹಿಸಿದರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page