6

ಸೇವೆಗೆ ಸಂದ ಸನ್ಮಾನ | ಪ್ರತಿಬಿಂಬದಲ್ಲಿ ಪ್ರಜ್ವಲಿಸುವ ಪತ್ರಕರ್ತ

ಭಟ್ಕಳ: ಮೂರು ದಶಕಗಳಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿರುವ ರಾಧಾಕೃಷ್ಣ ಭಟ್ಟ ಅವರ ಸೇವೆ ಗುರುತಿಸಿದ ಅಖಿಲ ಹವ್ಯಕ ಮಹಾಸಭಾ ಡಿ 8ರಂದು ಅವರಿಗೆ ಸನ್ಮಾನಿಸುತ್ತಿದೆ.

ಹೊನ್ನಾವರದ ಎಸ್.ಡಿ.ಎಂ. ಕಾಲೇಜಿನಲ್ಲಿ ನಡೆಯಲಿರುವ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗ `ಪ್ರತಿಬಿಂಬ-ಸನ್ಮಾನ’ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಈ ಸನ್ಮಾನ ನಡೆಯಲಿದೆ. 1989ರಲ್ಲಿ ಪತ್ರಕರ್ತರಾಗಿ ಬರೆಯಲು ಶುರು ಮಾಡಿದ ರಾಧಾಕೃಷ್ಣ ಭಟ್ಟ ಅವರು ಉದಯವಾಣಿ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆಯ ಭಟ್ಕಳ ಪ್ರತಿನಿಧಿಯಾಗಿದ್ದಾರೆ. 1993ರಲ್ಲಿ ಭಟ್ಕಳ ತಾಲೂಕಾ ಪತ್ರಕರ್ತರ ಸಂಘ ಸ್ಥಾಪಿಸಿ ಅದರ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.

2018ರಿಂದ 2022ರವರೆಗೆ ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಸಮಾಜದಲ್ಲಿನ ಆಗು-ಹೋಗುಗಳ ಜೊತೆಗೆ ಅಭಿವೃದ್ಧಿ ಪರ ಪತ್ರಿಕೋದ್ಯಮ ನಡೆಸಿದವರಲ್ಲಿ ರಾಧಾಕೃಷ್ಣ ಭಟ್ಟ ಅವರು ಮುಂಚೂಣಿಯಲ್ಲಿದ್ದಾರೆ. ಅವರ ಸೇವೆ ಗುರುತಿಸಿ ಈಗಾಗಲೇ ಹತ್ತು ಹಲವು ಪುರಸ್ಕಾರಗಳು ದೊರೆತಿವೆ.

 

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page