6

ಕೃಷಿ ಯೋಜನೆ | ಯಾರಿಗೆಲ್ಲ ಸಿಗುತ್ತೆ ಇದರ ಲಾಭ?

ಕಾರವಾರ: ಕೃಷಿ ಯಾಂತ್ರಿಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಅಡಿ ಸರ್ಕಾರ ಸಬ್ಸಿಡಿ ದರದಲ್ಲಿ ವಿವಿಧ ಯಂತ್ರೋಪಕರಣಗಳ ಖರೀದಿಗೆ ನೆರವು ನೀಡುತ್ತಿದೆ. ಸಾಮಾನ್ಯ ವರ್ಗದ ರೈತರಿಗೆ ಶೇ 50 ಹಾಗೂ ಪರಿಶಿಷ್ಟ ಸಮುದಾಯದ ರೈತರಿಗೆ ಶೇ 90ರ ಸಬ್ಸಿಡಿ ದರದಲ್ಲಿ ಹಲವು ಬಗೆಯ ಯಂತ್ರೋಪಕರಣಗಳನ್ನು ವಿತರಿಸಲಾಗುತ್ತಿದೆ.

ಮಿನಿ ಟ್ರ್ಯಾಕ್ಟರ್ ಪವರ್ ಟಿಲ್ಲರ್, ರೋಟೊವೆಟರ್, ಕಳೆ ಕೊಚ್ಚುವ ಯಂತ್ರಗಳು, ಪವರ್ ವಿಡರ್, ಪವರ್ ಸ್ಟೆಯರ್, ಡೀಸೆಲ್ ಪಂಪಸೆಟ್, ಪ್ಲೊರ‍್ಮೀಲ್, ಯಂತ್ರ ಚಾಲಿತ ಮೊಟೊಕಾರ್ಟ, ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು ಮತ್ತು ಇತರೆ ಹೈಟೆಕ್ ಕೃಷಿ ಉಪಕರಣಗಳನ್ನು ರೈತರು ಖರೀದಿಸಬಹುದು. ಇದರೊಂದಿಗೆ ತುಂತುರು ನೀರಾವರಿ ಯೋಜನೆಯಡಿಯಲ್ಲಿ ಶೇ 90 ರ ರಿಯಾಯಿತಿ ದರದಲ್ಲಿ ತುಂತುರು ನೀರಾವರಿ ಘಟಕ (ಹೆಚ್‌ಡಿಪಿಇ ಪೈಪ್) ವಿತರಿಸಲಾಗುತ್ತಿದ್ದು, ಆಸಕ್ತ ರೈತರು ಪಹಣಿ, ಆಧಾರ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಪ್ರತಿ, ಫೋಟೋ ಜೊತೆ ರೂ 100 ಛಾಪಾ ಕಾಗದದ ಜೊತೆ ರೈತ ಸಂಪರ್ಕ ಕೇಂದ್ರಕ್ಕೆ ತೆರಳಿ ಅರ್ಜಿ ಸಲ್ಲಿಸಬಹುದು.

ಇನ್ನೂ ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ರೈತರಿಗೆ ನೀರು ಸಂಗ್ರಹಣಾ ರಚನೆ (ಕೃಷಿ ಹೊಂಡ), ಕೃಷಿ ಹೊಂಡದ ಸುತ್ತಲು ತಂತಿ ಬೇಲಿ ನಿರ್ಮಾಣ, ಹೊಂಡದಿAದ ನೀರು ಎತ್ತಲು ಡೀಸೆಲ್/ಸೋಲಾರ್ ಪಂಪ್‌ಸೆಟ್(10ಎಚ್.ಪಿ ವರೆಗೆ) ಮತ್ತು ಬೆಳೆಗೆ ನೀರು ಹಾಯಿಸಲು ಸೂಕ್ಷö್ಮ ನೀರಾವರಿ ಘಟಕ ಸೌಲಭ್ಯಗಳನ್ನು ಸಾಮಾನ್ಯ ರೈತರಿಗೆ ಶೇ 90ರಷ್ಟು ಸಹಾಯಧನದಲ್ಲಿ ನೀಡಲಾಗುತ್ತದೆ. ಕೃಷಿ ಭಾಗ್ಯ ಯೋಜನೆಗೆ ರೈತರು ಒಟ್ಟು ಸಾಗುವಳಿ ಕ್ಷೇತ್ರದ ಒಂದು ಸರ್ವೇ ನಂಬರನಲ್ಲಿ ಕನಿಷ್ಠ 1ಎಕರೆ ಭೂಮಿ ಹೊಂದಿರಬೇಕು. ಹಿಂದಿನ ಸಾಲುಗಳಲ್ಲಿ ಕೃಷಿ ಭಾಗ್ಯ ಯೋಜನೆ ಅಥವಾ ಇನ್ನಾವುದೇ ಯೋಜನೆಯಡಿ ಕೃಷಿ ಹೊಂಡ ಫಲಾನುಭವಿಯಾಗಿರುವ ರೈತರಿಗೆ ಈ ಯೋಜನೆ ಸಿಗಲ್ಲ.

 

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page