6

ಬಿಪಿ-ಶುಗರು | ಕೈಗಾ ಅಣು ಉದ್ಯೋಗಿ ಸಾವಿನಲ್ಲಿ ಅನುಮಾನವೇ ಇಲ್ಲ!

ಕಾರವಾರ: ಕೈಗಾ ಅಣು ವಿದ್ಯುತ್ ಘಟಕದಲ್ಲಿ ಕೆಲಸ ಮಾಡುತ್ತಿದ್ದ ನಾಗರಾಜ ಹಾದಿಮನೆ ಸಾವನಪ್ಪಿದ್ದಾರೆ.

`ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆಯಿಂದ ಅವರು ಸಾವನಪ್ಪಿದ್ದು, ಈ ಸಾವಿನಲ್ಲಿ ಯಾವುದೇ ಸಂಶಯವಿಲ್ಲ’ ಎಂದು ಅವರ ಸಹೋದರ ಉದಯ ಹಾದಿಮನೆ ಪೊಲೀಸ್ ದೂರಿನಲ್ಲಿ ವಿವರಿಸಿದ್ದಾರೆ. ಕುಮಟಾದ ನಾಗದೇವಿ ರಸ್ತೆಯವರಾದ ನಾಗರಾಜ ಲಕ್ಷ್ಮಣ ಹಾದಿಮನೆ (58) ಎನ್‌ಪಿಸಿಐಎಲ್ ಕೈಗಾದಲ್ಲಿ ಉದ್ಯೋಗದಲ್ಲಿದ್ದರು. ಮಲ್ಲಾಪುರ ಟೌನ್‌ಶಿಪ್’ನ ಪೇಸ್ – 1ರಲ್ಲಿ ಅವರು ವಾಸವಾಗಿದ್ದರು.

ಕಳೆದ 15 ವರ್ಷಗಳಿಂದ ಮದುಮೇಹ ಹಾಗೂ ರಕ್ತದೊತ್ತಡದಿಂದ ಅವರು ಬಳಲುತ್ತಿದ್ದು, ಸ್ಥಳೀಯ ವೈದ್ಯರಿಂದ ಇದಕ್ಕೆ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ನಾಗರಾಜ ಹಾದಿಮನೆ ಅವರು ಡಿ 11ರಂದು ಕೈಗಾ ಅಣು ಘಟಕಕ್ಕೆ ಕೆಲಸಕ್ಕೆ ಹೋಗಿದ್ದರು. ಆಗ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಲ್ಲಿದ್ದ ಇತರೆ ಉದ್ಯೋಗಿಗಳು ಅವರನ್ನು ಆಂಬುಲೆನ್ಸ್ ಮೂಲಕ ಮಲ್ಲಾಪುರದ ಕೆಜಿಎಸ್ ಆಸ್ಪತ್ರೆಗೆ ದಾಖಲಿಸಿದರು.

ವಿಪರೀತ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಕಾರಣದಿಂದ ನಾಗರಾಜ ಹಾದಿಮನೆ ಅವರು ಸಾವನಪ್ಪಿರುವ ಬಗ್ಗೆ ಕೆಎಸ್‌ಆರ್‌ಟಿಸಿಯಲ್ಲಿ ಸಂಚಾರ ನಿಯಂತ್ರಕರಾಗಿರುವ ಅವರ ತಮ್ಮ ಉದಯ ಹಾದಿಮನೆ ಪೊಲೀಸ್ ಪ್ರಕರಣ ದಾಖಲಿಸಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page