6

ಶಾಸಕರ ಮನೆ ಮುಂದೆ ತಮಟೆ ಸದ್ದು!

ಹಳಿಯಾಳ: ನ್ಯಾಯಮೂರ್ತಿ ಎ ಜೆ ಸದಾಶಿವ ವರದಿ ಜಾರಿಗೆ ದಲಿತ ಸಮುದಾಯದವರು ಶನಿವಾರ ಪ್ರತಿಭಟನೆ ನಡೆಸಿದರು. ಶಾಸಕ ಆರ್ ವಿ ದೇಶಪಾಂಡೆ ಅವರ ಮನೆ ಮುಂದೆ ತಮಟೆ ಬಾರಿಸಿದ ಪ್ರತಿಭಟನಾಕಾರರು ನಂತರ ತಹಶೀಲ್ದಾರ್ ಕಚೇರಿ ಮುಂದೆಯೂ ತಮಟೆ ಬಾರಿಸಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.

`ಪರಿಶಿಷ್ಟ ಜಾತಿಯವರು ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದಿದ್ದಾರೆ. ಆರ್ಥಿಕವಾಗಿಯೂ ಅವರು ಅಭಿವೃದ್ಧಿ ಹೊಂದಲು ಎಜೆ ಸದಾಶಿವ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು’ ಎಂದು ಒತ್ತಾಯಿಸಿದರು. ಯಲ್ಲಾಪುರ ನಾಕಾದ ಡಾ ಬಾಬಾಸಾಹೇಬ ಅಂಬೇಡ್ಕರ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಮುಖ್ಯ ರಸ್ತೆ ಮೂಲಕ ಹೊರಟ ಮೆರವಣಿಗೆ ವಿವಿಧ ಭಾಗಗಳಲ್ಲಿ ಸಂಚರಿಸಿತು. ನಂತರ ಪ್ರತಿಭಟನಾಕಾರರು ತಹಶೀಲ್ದಾರ್ ಕಚೇರಿ ಮೂಲಕ ಮುಖ್ಯಮಂತ್ರಿಗಳಿಗೆ ತಮ್ಮ ಮನವಿ ಸಲ್ಲಿಸಿದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page