6

ವಿವಾಹ ವಿಚ್ಚೇದನಕ್ಕೆ ಬಂದವರು ಮತ್ತೆ ಒಂದಾದರು!

ಕಾರವಾರ: ವಿವಾಹ ವಿಚ್ಚೇದನಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದ ದಂಪತಿಗೆ ನ್ಯಾಯಾಧೀಶರು ಬುದ್ದಿ ಹೇಳಿದ್ದು, ಪರಸ್ಪರ ಕಚ್ಚಾಡುತ್ತಿದ್ದವರು ಮತ್ತೆ ಒಂದಾದರು. ಪರಸ್ಪರ ಪ್ರೀತಿ – ವಿಶ್ವಾಸದಿಂದ ಬದುಕು ನಡೆಸುವ ಬಗ್ಗೆ ದಂಪತಿ ವಾಗ್ದಾನ ಮಾಡಿದರು.

ನ್ಯಾಯಾಲಯದ ಆವರಣದಲ್ಲಿ ನಡೆದ ಲೋಕ ಅದಾಲತ್ ಹಲವು ವಿಶೇಷತೆಗಳಿಗೆ ಸಾಕ್ಷಿಯಾಯಿತು. ಸಾಲ ಮರುಪಾವತಿ, ಪರಿಹಾರ, ದಂಡ ಹಾಗೂ ಇತ್ಯಾದಿ ಹಣಕಾಸಿನ ಪ್ರಕರಣಗಳಿಗೆ ಸಂಬoಧಪಟ್ಟoತೆ ಒಟ್ಟು ರೂಪಾಯಿ 30,76,76,175 ರೂ ಹಣ ಸಂತ್ರಸ್ತರಿಗೆ ಸಿಕ್ಕಿತು. ಸಿದ್ದಾಪುರ ಮತ್ತು ಮುಂಡಗೋಡ ಸಿವಿಲ್ ನ್ಯಾಯಾಲಯದಲ್ಲಿ ರಾಜಿಯಾಗಿ ದಂಪತಿಗಳು ಒಟ್ಟಿಗೆ ಜೀವನ ನಡೆಸಲು ಒಪ್ಪಿಕೊಂಡು ಕೂಡಿ ಹೋಗಿರುವ ಒಳ್ಳೆಯ ಬೆಳವಣಿಗೆಯೂ ನಡೆಯಿತು.

ಈ ಬಾರಿಯ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಜಿಲ್ಲೆಯ ಒಟ್ಟು 37 ಕುಟುಂಬದ ಆಸ್ತಿ ವಿಭಜನೆಯ ಪ್ರಕರಣಗಳು ಹಾಗೂ 484 ಚೆಕ್ ಬೌನ್ಸ್ ಪ್ರಕರಣಗಳು ಮತ್ತು 61 ಮೋಟಾರು ಅಪಘಾತ ಪರಿಹಾರ ಪ್ರಕರಣಗಳು ರಾಜಿಯಾಗಿದ್ದು ಇವುಗಳಲ್ಲಿ 1 ಆಸ್ತಿ ವಿಭಜನೆ ಪ್ರಕರಣ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜಿಯಾದವು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ. ಎಸ್. ವಿಜಯಕುಮಾರ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದಿವ್ಯಶ್ರೀ ಸಿ ಎಂ ಪ್ರಕರಣಗಳನ್ನು ಇತ್ಯರ್ಥ ಮಾಡಿದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page