6

ಕುಸಿದು ಬಿದ್ದು ಸಾವನಪ್ಪಿದ ಕಾರ್ಮಿಕ: ಬೀಡಿ.. ಇಂದೇ ಬಿಟ್ಟು ಬಿಡಿ!

ಕಾರವಾರ: ಅನೇಕ ವರ್ಷಗಳಿಂದ ಬೀಡಿ ಸೇದುವ ಚಟ ಹೊಂದಿದ್ದ ಪಾಂಡುರoಗ ಗೌಡ ಕುಸಿದು ಬಿದ್ದು ಸಾವನಪ್ಪಿದ್ದಾರೆ.

ಬೈತಖೋಲದ ಗೌಡವಾಡದಲ್ಲಿ ವಾಸವಾಗಿದ್ದ ಪಾಂಡುರoಗ ಗೌಡ (59) ಡಿ 22ರಂದು ಸರ್ವೋದಯ ನಗರಕ್ಕೆ ಕೂಲಿ ಕೆಲಸಕ್ಕೆ ಹೋಗಿದ್ದರು. ಮಧ್ಯಾಹ್ನ ಊಟ ಮುಗಿಸಿ ಕೆಲಸ ಮಾಡುತ್ತಿದ್ದರು. ಸಂಜೆ 6.30ರ ವೇಳೆಗೆ ಅವರು ಕುಸಿದು ಬಿದ್ದರು.

ಅವರ ಜೊತೆ ಕೆಲಸ ಮಾಡುತ್ತಿದ್ದ ಬಾಲಕೃಷ್ಣ ಕೋಡಾರಕರ್ ಅವರು ಪಾಂಡುರAಗ ಗೌಡರನ್ನು ಆಸ್ಪತ್ರೆಗೆ ದಾಖಲಿಸಿದರು. ಅದಾದ ನಂತರ ಪಾಂಡು ರಂಗ ಅವರ ಮಗ ಸಂದೇಶ ಗೌಡ ಅವರಿಗೂ ಫೋನ್ ಮಾಡಿ ವಿಷಯ ತಿಳಿಸಿದರು.

ಸಂದೇಶ ಗೌಡ ಬಂದು ವಿಚಾರಿಸಿದಾಗ ಆಸ್ಪತ್ರೆಗೆ ಬರುವ ಮೊದಲೇ ಅವರ ತಂದೆ ಸಾವನಪ್ಪಿರುವ ಬಗ್ಗೆ ವೈದ್ಯರು ತಿಳಿಸಿದರು. ಮೊದಲಿನಿಂದಲೂ ಬೀಡಿ ಸೇದುವ ಚಟ ಹೊಂದಿದ್ದ ಪಾಂಡುರAಗ ಗೌಡ ತಮಗಿದ್ದ ರೋಗದಿಂದ ಸಾವನಪ್ಪಿದ್ದಾರೆ ಎಂದು ಸಂದೇಶ ಗೌಡ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.

ಪೊಲೀಸ್ ಪ್ರಕರಣ ದಾಖಲಿಸಿ ಅವರು ಶವ ಪಡೆದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page