6

ಸಾಹಸಿ ಮಹಿಳೆಯ ಅಸಹಜ ಸಾವು: ಕೊಲೆಯ ಅನುಮಾನ!

ಸಿದ್ದಾಪುರ: ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ. ಸೋಮವಾರ ರಾತ್ರಿ ಅವರು ಸಾವನಪ್ಪಿದ ಶಂಕೆಯಿದ್ದು, ಬುಧವಾರ ಬೆಳಗ್ಗೆ ಈ ವಿಷಯ ಹೊರ ಬಂದಿದೆ.

ಸೊರಬ ರಸ್ತೆಯ ಡಿ ಸಿಲ್ವಾ ವೈನ್ಪ ಬಳಿ ಗೀತಾ ಹುಂಡೆಕರ್ ಒಂಟಿಯಾಗಿ ವಾಸಿಸುತ್ತಿದ್ದರು. ಸುಮಾರು 75 ವರ್ಷದ ಅವರು ಬ್ಯಾಂಕ್ ಒಂದರಲ್ಲಿ ಪಿಗ್ಮಿ ಎಜೆಂಟರಾಗಿ ಬದುಕು ಕಟ್ಟಿಕೊಂಡಿದ್ದರು. ಅವರ ಪಿಗ್ಮಿ ಕಾಸಿನ ಮೇಲೆ ಆಸಪಟ್ಟ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಎಲ್ಲರ ಜೊತೆ ಅನ್ಯೋನ್ಯವಾಗಿದ್ದ ಗೀತಾ ಅವರು ಇನ್ನಿಲ್ಲ ಎಂಬ ವಿಷಯ ಕೇಳಿ ನೂರಾರು ಜನ ಅವರ ಮನೆ ಬಳಿ ಜಮಾಯಿಸಿದರು. ಪೊಲೀಸರು ವೃದ್ಧೆಯ ಶವದ ಕಡೆ ಬರದಂತೆ ಸಾರ್ವಜನಿಕರಿಗೆ ಸೂಚಿಸಿದರು.

ವಿವಿಧ ತನಿಖಾ ತಂಡದವರು ಸ್ಥಳದಲ್ಲಿ ಬೀಡು ಬಿಟ್ಟಿದ್ದು, ಸಾಕ್ಷಿ ಸಂಗ್ರಹ ಕಾರ್ಯ ನಡೆಯುತ್ತಿದೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page