6

ಸಾಗವಾನಿ ಕಡಿದು ಜೈಲು ಸೇರಿದ!

ಶಿರಸಿ: ಮರಗುಂಡಿ ಗ್ರಾಮದಲ್ಲಿ ಸಾಗವಾನಿ ಮರ ಕಡಿದ ಅನಿಲ್ ಗೌಡರನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ. ಆತನಿಂದ 13 ಮರದ ತುಂಡು ಹಾಗೂ ಇನ್ನಿತರ ಜಲಾವುಗಳನ್ನು ವಶಕ್ಕೆ ಪಡೆದಿದ್ದಾರೆ.

ಅನಿಲ ಗೌಡ ಮರ ಕಡಿತ ನಡೆಸಿರುವ ಬಗ್ಗೆ ಬನವಾಸಿ ವಲಯ ಅರಣ್ಯಾಧಿಕಾರಿ ಭವ್ಯ ನಾಯ್ಕ ಅವರಿಗೆ ಮಾಹಿತಿ ದೊರೆತಿದ್ದು,ಅ ವರು ಉಪರಣ್ಯ ಸಂರಕ್ಷಣಾಧಿಕಾರಿ ಡಾ ಅಜ್ಜಯ್ಯ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸ್ ಎಸ್ ನಿಂಗಾಣಿ ಅವರಿಗೆ ಮಾಹಿತಿ ರವಾನಿಸಿದರು. ಉಪವಲಯ ಅರಣ್ಯಾಧಿಕಾರಿ ರವೀಂದ್ರ ಕರ್ನಲ್, ಅರಣ್ಯ ಸಿಬ್ಬಂದಿ ಯಶೋಧ ನಾಯ್ಕ, ಮಾಲತೇಶ ವಿ ಬಾರ್ಕಿ, ಈರಣ್ಣ ಅಕ್ಕೂರು, ದಯಾನಂದ ಬೋರಕರ್ ಜೊತೆ ಅವರು ದಾಳಿ ನಡೆಸಿದರು.

ಅರಣ್ಯ ವೀಕ್ಷಕ ನರಸಿಂಹ ನಾಯ್ಕ, ರಮೇಶ ನಾಯ್ಕ, ಸುಭಾಶ ನಾಯ್ಕ, ನಾರಾಯಣ ನಾಯ್ಕ ಹಾಗೂ ವಾಹನ ಚಾಲಕ ಪರಶುರಾಮ ನಾಯ್ಕ ಮತ್ತು ಮಂಜುನಾಥ ನಾಯ್ಕ ಆರೋಪಿಯನ್ನು ಹಿಡಿದರು. ಪ್ರಕರಣದ ತನಿಖೆ ಮುಂದುವರೆದಿದೆ. ವಶಕ್ಕೆ ಪಡೆದ ನಾಟಾವನ್ನು ಡಿಪೋಗೆ ಸಾಗಿಸಲಾಗಿದೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page