6

ಮುರುಡೇಶ್ವರ | ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ

ಭಟ್ಕಳ: ಮುರುಡೇಶ್ವರದಲ್ಲಿ ಹೊಸ ವರ್ಷ ಸಂಭ್ರಮಾಚರಣೆಯ ಹಿನ್ನಲೆಯಲ್ಲಿ ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳದವರು ಎಲ್ಲಡೆ ತಪಾಸಣೆ ನಡೆಸಿದ್ದಾರೆ.

ಪ್ರವಾಸಿ ತಾಣ ಮುರುಡೇಶ್ವರದಲ್ಲಿ ಸಮುದ್ರ ತೀರ ಪ್ರವೇಶಕ್ಕೆ ನಿರ್ಬಂಧ ಮುಂದುವರೆಸಲಾಗಿದ್ದು, ಮಂಗಳವಾರ ಸಂಜೆ ಪೊಲೀಸ್ ಅಧೀಕ್ಷಕ ಎಂ ನಾರಾಯಣ ವಿವಿಧ ಕಡೆ ಪರಿಶೀಲನೆ ನಡೆಸಿದರು.

`ಕಡಲ ತೀರದಲ್ಲಿ ಅನಧಿಕೃತವಾಗಿ ಇರುವ ಅಂಗಡಿ, ದೋಣಿಗಳನ್ನು ಮೊದಲು ತೆರವುಗೊಳಿಸಬೇಕು. ಸ್ವಚ್ಛತೆ ಆದ್ಯತೆಗೆ ನೀಡಬೇಕು’ ಎಂದರು. `ಜೀವ ರಕ್ಷಕ ಸಿಬ್ಬಂದಿಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಬೇಕು. ಸುರಕ್ಷತೆ ಇಲ್ಲದ ಕಡೆ ಪ್ರವಾಸಿಗರಿಗೆ ಪ್ರವೇಶ ನೀಡಲು ಸಾಧ್ಯವಿಲ್ಲ’ ಎಂದವರು ಹೇಳಿದರು. `ನಮಗೆ ವ್ಯಾಪಾರ ವಹಿವಾಟಿಗಿಂತ ಜನರ ಪ್ರಾಣ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಕ್ರಮ ಜರುಗಿಸಿ’ ಎಂದು ಸೂಚಿಸಿದರು. ಡಿವಾಯ್‌ಎಸ್ಪಿ ಮಹೇಶ, ತಹಸೀಲ್ದಾರ ನಾಗೇಂದ್ರ ಕೋಳಶೆಟ್ಟಿ, ಸಿಪಿಐ ಸಂತೋಷ ಇದ್ದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page