6

ಬಹುದಿನ ಕಳೆದರೂ ಮುಗಿಯದ ಬಹುಗ್ರಾಮ ನೀರು ಯೋಜನೆ!

ಹಳಿಯಾಳ: 114 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಬಹುಗ್ರಾಮ ಕುಡಿಯುವ ನೀರಿನ ಘಟಕ ನಿರ್ಮಾಣ ಕೆಲಸ ಈವರೆಗೂ ಪೂರ್ಣವಾಗದ ಬಗ್ಗೆ ಜಿ ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ ಅಸಮಧಾನ ವ್ಯಕ್ತಪಡಿಸಿದ್ದಾರೆ. `ಈವರೆಗೆ ಸಿವಿಲ್ ಕೆಲಸ ಮಾತ್ರ ಮುಗಿದಿದ್ದು, ಫೆ 15ರ ಒಳಗೆ ಎಲ್ಲಾ ಕೆಲಸ ಮುಗಿಸಿ ಮನೆಗಳಿಗೆ ನೀರು ಪೂರೈಸಬೇಕು’ ಎಂದು ಅವರು ತಾಕೀತು ಮಾಡಿದ್ದಾರೆ.

ಹಳಿಯಾಳ ತಾಲೂಕಿನ ಯಡೋಗ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಹುಗ್ರಾಮ ಕುಡಿಯುವ ನೀರಿನ ಘಟಕಕ್ಕೆ ಭೇಟಿ ನೀಡಿದ ಅವರು ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಪಡೆದು, ನಿದೇಶನ ನೀಡಿದರು. ನರೇಗಾ ಯೋಜನೆಯಡಿ ಕಡಿಮೆ ಮಾನವ ದಿನಗಳನ್ನು ಸೃಜನೆ ಮಾಡಿದ ಗ್ರಾಮ ಪಂಚಾಯತಿಗಳು ಪ್ರಗತಿ ಸಾಧಿಸುವುದು ಹಾಗೂ ಕಾಮಗಾರಿಯನ್ನು ಪೂರ್ಣಗೊಳಿಸದ ಸಾರ್ವಜನಿಕರಿಂದ ಹಣವನ್ನು ಹಿಂಪಡೆಯುವAತೆ ತಿಳಿಸಿದರು. 15ನೇ ಹಣಕಾಸಿನಲ್ಲಿರುವ ಮೊತ್ತವನ್ನು ಗ್ರಾಮದ ವಿವಿಧ ಅಭಿವೃದ್ಧಿ ಕೆಸಲಕ್ಕೆ ವಿನಿಯೋಗಿಸುವುದು ಹಾಗೂ ಅರಿವು ಕೇಂದ್ರದ ಸಿಬ್ಬಂದಿ ವೇತನವನ್ನು 15ನೇ ಹಣಕಾಸಿನಿಂದ ಮಾಡಲು ತಿಳಿಸಿದರು.

ರಾಜ್ಯದಲ್ಲಿಯೇ ಕರವಸೂಲಿಯಲ್ಲಿ ಜಿಲ್ಲೆಯು ಮೊದಲ ಸ್ಥಾನದಲ್ಲಿದ್ದು, ಅಭಿಯಾನಗಳನ್ನು ಕೈಗೊಳ್ಳುವ ಮೂಲಕ ಹೆಚ್ಚು ಪ್ರಗತಿ ಸಾಧಿಸಲು ಸೂಚಿಸಿದರು. ದಾಂಡೇಲಿ ತಾಲೂಕಿನ ಜಾಕವೇಲ್ ಕಾಮಗಾರಿ, ಅಂಬೇವಾಡಿಯ ಚೆಸ್ ಪಾರ್ಕ್ ಮತ್ತು ವ್ಯಾಯಾಮ ಶಾಲೆ, ಛತ್ರನಾಳದ ಎಂವಿಎಸ್‌ನಲ್ಲಿ ನಿರ್ಮಾಣವಾದ ZPಖಿ, ಬಿಕೆ ಹಳ್ಳಿ ಗ್ರಾಮ ಪಂಚಾಯತಿ ಕಟ್ಟಡ ಕಾಮಗಾರಿ ಹಾಗೂ ನರೇಗಾ ಯೋಜನೆಯಡಿ ಚಿಬ್ಬಲಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತೆಗನಳ್ಳಿ ಗ್ರಾಮದಲ್ಲಿ ನಿರ್ಮಾಣವಾದ ಸ್ಮಶಾನ ಕಾಮಗಾರಿ ಪರಿಶೀಲಿಸಿದರು.

ದಾಂಡೇಲಿ ತಾಲೂಕ ಪಂಚಾಯತನ ಕಾರ್ಯ ನಿರ್ವಾಹಕ ಅಧಿಕಾರಿ ಎಮ್ ಭಾರತಿ, ಹಳಿಯಾಳ ತಾಲೂಕ ಪಂಚಾಯತನ ಕಾರ್ಯ ನಿರ್ವಾಹಕ ಅಧಿಕಾರಿ ಆರ್ ಸತೀಶ್, ನರೇಗಾ ಸಹಾಯಕ ನಿರ್ದೇಶಕರಾದ ಸಂತೋಷ್ ರಾಠೋಡ್, ಅನುಪಮಾ ಬೆನ್ನೂರ್ ಇದ್ದರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page