6

ಉಪವಾಸ ಸತ್ಯಾಗ್ರಹ: ಸಮಾನ ಮನಸ್ಕ ಜೊತೆಗಾರರು ಬೇಕಾಗಿದ್ದಾರೆ!

ಶಿರಸಿ: ಹೈಟೆಕ್ ಸರ್ಕಾರಿ ಆಸ್ಪತ್ರೆಯಲ್ಲಿನ ಗೊಂದಲ ಬಗೆಹರಿಸುವಂತೆ ಕೋರಿ ಜನವರಿ 13ರಂದು ಸಾಮಾಜಿಕ ಕಾರ್ಯಕರ್ತ ಅನಂತಮೂರ್ತಿ ಹೆಗಡೆ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. `ಆರೋಗ್ಯದ ಹಕ್ಕಿಗಾಗಿ ನಡೆಯುವ ಈ ಹೋರಾಟದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಅವರು ಕರೆ ನೀಡಿದ್ದಾರೆ.

`142 ಕೋಟಿ ರೂ ಮೌಲ್ಯದ ಆಸ್ಪತ್ರೆ ಕೆಲಸ ಸರಿಯಾಗಿಲ್ಲ. ಈ ಬಗ್ಗೆ ಅರಿವಿದ್ದರೂ ನಾವು ಮೌನವಾಗಿದ್ದರೆ ಪ್ರಯೋಜನವಿಲ್ಲ. ಹೈಟೆಕ್ ಆಸ್ಪತ್ರೆ ಬಗ್ಗೆ ಪ್ರಶ್ನಿಸದೇ ಇದ್ದರೆ ಆ ಕಟ್ಟಡ ದೊಡ್ಡ ಗೋಡೌನ್ ಆಗಲಿದ್ದು, ಸಾವಿರಾರು ಸಂಖ್ಯೆಯಲ್ಲಿ ಹೋರಾಟದಲ್ಲಿ ಭಾಗವಹಿಸಿ ಈ ಬಗ್ಗೆ ಪ್ರಶ್ನಿಸೋಣ’ ಎಂದವರು ಹೇಳಿದ್ದಾರೆ.

`ಈ ಹೋರಾಟ ಯಾರ ವಿರುದ್ಧವೂ ಅಲ್ಲ. ಇದು ಒಬ್ಬನ ಹೋರಾಟವೂ ಅಲ್ಲ. ಕ್ಷೇತ್ರದ ಜನರ ಹಿತ ಕಾಪಾಡುವುದಕ್ಕಾಗಿ ಈ ಹೋರಾಟ ಅನಿವಾರ್ಯವಾಗಿದ್ದು, ಪ್ರತಿಯೊಬ್ಬರು ಈ ಹೋರಾಟದಲ್ಲಿ ಭಾಗಿಯಾಗಬೇಕು’ ಎಂದು ಅವರು ಮನವಿ ಮಾಡಿದ್ದಾರೆ. `ಹೈಟೆಕ್ ಆಸ್ಪತ್ರೆ ಸ್ಥಾಪನೆಯಾದಲ್ಲಿ ಉಚಿತವಾಗಿ ಹೃದಯ ಚಿಕಿತ್ಸೆ ಸಿಗಲಿದೆ. ಎಲ್ಲಾ ಬಗೆಯ ಸ್ಕಾನಿಂಗ್ ಉಚಿತವಾಗಿ ಸಾಧ್ಯವಾಗಲಿದೆ. ಪ್ರತಿಯೊಬ್ಬರಿಗೂ ಆಸ್ಪತ್ರೆಯ ಅವಷ್ಯಕತೆ ಬೀಳಲಿದ್ದು, ಭವಿಷ್ಯದ ಚಿಂತನೆಗಾಗಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಡಬೇಕಿದೆ’ ಎಂದವರು ಹೇಳಿದ್ದಾರೆ.

ಜನವರಿ 13ರ ಬೆಳಗ್ಗೆ 9 ಗಂಟೆಗೆ ಶಿರಸಿ ನಗರದ ಬಿಡ್ಕಿಬೈಲಿನಲ್ಲಿರುವ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಹೋರಾಟ ಶುರುವಾಗಲಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿ ನಂತರ ತಹಶೀಲ್ದಾರ ಕಛೇರಿಯಲ್ಲಿ ಧರಣಿ ನಡೆಸಲಾಗುತ್ತದೆ’ ಎಂದವರು ವಿವರಿಸಿದ್ದಾರೆ.

 

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page