6

ಅರಣ್ಯ ಅತಿಕ್ರಮಣ | ಮೂರು ತಲೆಮಾರಿನ ದಾಖಲೆ ವಿರೋಧಿಸಿ ಮೂರು ಸಾವಿರ ಜನರ ಪ್ರತಿಭಟನೆ!

ಕುಮಟಾ: ಮೂರು ಸಾವಿರಕ್ಕೂ ಅಧಿಕ ಅರಣ್ಯವಾಸಿಗಳು ಉಪವಿಭಾಗಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಅರಣ್ಯವಾಸಿಗಳ ಅರ್ಜಿ ಪುನರ್ ಪರಿಶೀಲನೆ ನೆಪದಲ್ಲಿ ಅನಗತ್ಯ ಗೊಂದಲ ಸೃಷ್ಠಿಸುತ್ತಿರುವದರ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕುಮಟಾ ಉಪವಿಭಾಗ ಅರಣ್ಯ ಹಕ್ಕು ಸಮಿತಿಗೆ ಸಹಾಯಕ ಆಯುಕ್ತೆ ಕಲ್ಯಾಣಿ ಕಾಂಬ್ಳೆ ಅಧ್ಯಕ್ಷರಾಗಿದ್ದು, ಸೋಮವಾರ ಅವರ ಕಚೇರಿಗೆ ಅರಣ್ಯ ಅತಿಕ್ರಮಣದಾರರು ಆಗಮಿಸಿದ್ದರು. ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ನೇತೃತ್ವದಲ್ಲಿ ಎಲ್ಲರೂ ಆಕ್ಷೇಪಣಾ ಪತ್ರ ಸಲ್ಲಿಸಿದರು.

`2024ರ ನ 28ರಂದು ಅರಣ್ಯ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ ಅರ್ಜಿ ಪುನರ್ ಪರಿಶೀಲನೆಗೆ ಸರ್ಕಾರ ಆದೇಶಿಸಿದ್ದು, ಈ ಆದೇಶ ಕಾನೂನುಬಾಹಿರ. ಅಸ್ತಿತ್ವವೇ ಇಲ್ಲದ ಹಕ್ಕು ಸಮಿತಿಯಿಂದ ಅರ್ಜಿ ಪರಿಶೀಲನೆ ನಡೆಸುವುದು ಸರಿಯಲ್ಲ’ ಎಂದು ಅತಿಕ್ರಮಣದಾರರು ಆಕ್ಷೇಪವ್ಯಕ್ತಪಡಿಸಿದರು. `ಶೇ 50ರಷ್ಟು ಸದಸ್ಯರ ಅನುಪಸ್ಥಿತಿಯಲ್ಲಿ ಅರ್ಜಿ ಪರಿಶೀಲನೆ ನಡೆಯುತ್ತಿದೆ’ ಎಂದು ವಿವರಿಸಿದರು.

`ಉಚ್ಛ ನ್ಯಾಯಾಲಯದ ಮತ್ತು ಕೇಂದ್ರ ಸರ್ಕಾರದ ಆದೇಶ ನಿರ್ಲಕ್ಷಿಸಿ ಸಮೀತಿ 1930ರ ಪೂರ್ವದ ದಾಖಲೆಗಾಗಿ ನೋಟಿಸ್ ನೀಡುತ್ತಿದೆ. ಈ ಕ್ರಮ ಸರಿಯಲ್ಲ’ ಎಂದರು. ಕುಮಟಾ ತಾಲೂಕಾ ಅಧ್ಯಕ್ಷ ಮಂಜುನಾಥ ಮರಾಠಿ, ಜಿಲ್ಲಾ ಸಂಚಾಲಕ ಮಹೇಂದ್ರ ನಾಯ್ಕ ಕತಗಾಲ, ಸುರೇಶ ಪಟಗಾರ, ಸೀತರಾಮ ನಾಯ್ಕ ಬುಗರಿಬೈಲ್, ಜಗದೀಶ ಹರಿಕಾಂತ, ಸಾರಾಂಬಿ ಬೆಟ್ಕುಳಿ, ಶಂಕರ ಗೌಡ, ಗಣಪತಿ ಮರಾಠಿ, ಜಯಂತ ಮರಾಠಿ, ಸುನೀತಾ ಹರಿಕಾಂತ ಕಿಮಾನಿ, ಯಾಕುಬ ಸಾಬ ಬೆಟ್ಕುಳಿ, ಗಜಾನನ ಪಟಗಾರ ಹೊಲನಗದ್ದೆ, ವೆಂಕಟರಮಣ ಪಟಗಾರ, ರಾಜೀವ ಎಮ್ ಗೌಡ ಇತರರು ಪ್ರತಿಭಟನೆ ನೇತ್ರತ್ವವಹಿಸಿದ್ದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page