6

ಇನ್ನೂ ಬಾರದ ಬೆಳೆವಿಮೆ ಪರಿಹಾರ: ಮುಂಡಗೋಡದಲ್ಲಿಯೂ ರಸ್ತೆ ತಡೆ!

ಮುಂಡಗೋಡ: ಬೆಳೆ ವಿಮೆ ಪರಿಹಾರಕ್ಕೆ ಆಗ್ರಹಿಸಿ ಶಿರಸಿಯಲ್ಲಿ ಪ್ರತಿಭಟನೆ ಬೆನ್ನಲ್ಲೆ ಮುಂಡಗೋಡಿನ ರೈತರು ಸಹ ರಸ್ತೆ ತಡೆ ನಡೆಸಿ ಆಕ್ರೋಶವ್ಯಕ್ತಪಡಿಸಿದ್ದಾರೆ.

ಗುರುವಾರ ರಾಜ್ಯ ರೈತ ಸಂಘದವರು ಮಳಗಿಯಲ್ಲಿ ಧರಣಿ ನಡೆಸಿದ್ದು, ಶಿರಸಿ-ಹುಬ್ಬಳ್ಳಿ ರಾಜ್ಯ ಹೆದ್ದಾರಿ ತಡೆದು ಪರಿಹಾರಕ್ಕಾಗಿ ಪಟ್ಟು ಹಿಡಿದರು. `ಅತಿವೃಷ್ಟಿಯಿಂದ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ. ಆದರೆ, ಈವರೆಗೂ ವಿಮಾ ಕಂಪನಿ ಪರಿಹಾರ ಜಮಾ ಮಾಡಿಲ್ಲ. ರೈತರ ಸಮಸ್ಯೆಯನ್ನು ಸಹ ಆಲಿಸಿಲ್ಲ’ ಎಂದು ಪ್ರತಿಭಟನಾಕಾರರು ಆಕ್ರೋಶಹೊರಹಾಕಿದರು.

`ಕೂಡಲೇ ರೈತರ ಖಾತೆಗಳಿಗೆ ಪರಿಹಾರ ಜಮಾ ಮಾಡಬೇಕು. ಸರ್ಕಾರ ರೈತರ ಸಾಲಮನ್ನಾ ಮಾಡಬೇಕು’ ಎಂದು ಒತ್ತಾಯಿಸಿದರು. ಅರಣ್ಯ ಅತಿಕ್ರಮಣದಾರರಿಗೆ ಸಹ ಬೆಳೆ ಪರಿಹಾರ ಸಿಗಬೇಕು. ಅತಿಕ್ರಮಣ ಭೂಮಿ ಜಿಪಿಎಸ್ ಪ್ರಕ್ರಿಯೆ ಲೋಪ ಸರಿಪಡಿಸಬೇಕು’ ಎಂದು ಆಗ್ರಹಿಸಿದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page