6

ಶ್ರೀರಾಮ | ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯುವಕರ ಮೇಲುಗೈ

ಅಂಕೋಲಾದ ಶ್ರೀರಾಮ ಸ್ಟಡಿ ಸರ್ಕಲ್’ನಲ್ಲಿ ತರಬೇತಿ ಪಡೆದ ಇಬ್ಬರು ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಾಧನೆ ಮಾಡಿದ್ದಾರೆ.

ಹೊನ್ನಾವರದ ಸುಭಾಷ ಗೌಡ ಅವರು ಕೇಂದ್ರೀಯ ಮೀಸಲು ಪೊಲೀಸ್ ಪಡೆಗೆ (ಸಿಆರ್‌ಪಿಎಫ್) ಆಯ್ಕೆಯಾಗಿದ್ದಾರೆ. ಅಂಕೋಲಾದ ಆದರ್ಶ ಆಗೇರ್ ಅವರು ಕೆಡಿಸಿಸಿ ಬ್ಯಾಂಕ್’ಗೆ ಆಯ್ಕೆಯಾಗಿದ್ದಾರೆ. ಸಿಆರ್‌ಪಿಎಫ್ ನಡೆಸಿದ ಪರೀಕ್ಷೆಯಲ್ಲಿ ಸುಭಾಷ ಗೌಡ ಅವರು 12ನೇ ಸ್ಥಾನ ಪಡೆದಿದ್ದಾರೆ. ಆ ಮೂಲಕ ಅವರು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಟೆಕ್ನಿಕಲ್ ಹುದ್ದೆಗೆ ಆಯ್ಕೆಯಾಗಿದ್ದಾರೆ. ಸುಭಾಷ ಗೌಡ ಅವರು ಶ್ರೀರಾಮ ಸ್ಟಡಿ ಸರ್ಕಲ್’ನಲ್ಲಿ ಎಂಟು ತಿಂಗಳ ಕಾಲ ತರಬೇತಿ ಪಡೆದಿದ್ದರು.

ಇನ್ನೂ ಅಂಕೋಲಾದ ಆದರ್ಶ ಆಗೇರ್ ಅವರು ಶ್ರೀರಾಮ ಸ್ಟಡಿ ಸರ್ಕಲ್’ನಲ್ಲಿ ಬ್ಯಾಂಕ್ ಪರೀಕ್ಷೆಗಳಿಗಾಗಿ ತರಬೇತಿ ಪಡೆಯುತ್ತಿದ್ದರು. ಆರು ತಿಂಗಳ ತರಬೇತಿ ಪಡೆದಿದ್ದ ಅವರು ಕೆಡಿಸಿಸಿ ಬ್ಯಾಂಕ್ ಕರೆದ ಕ್ಲರ್ಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದು, ಪರೀಕ್ಷೆ ಎದುರಿಸಿ ಉತ್ತೀರ್ಣರಾಗಿದ್ದಾರೆ. ಈ ಇಬ್ಬರು ಅಭ್ಯರ್ಥಿಗಳಿಗೆ ಶ್ರೀರಾಮ ಸ್ಟಡಿ ಸರ್ಕಲ್’ನ ಸೂರಜ ನಾಯಕ ಅವರು ಮಾರ್ಗದರ್ಶನ ಮಾಡಿದ್ದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page