6

ಅರಣ್ಯ ಹಕ್ಕು | ಅರ್ಜಿ ಪುನರ್ ಪರಿಶೀಲನೆಗೆ ಆಕ್ಷೇಪಿಸಿ 5 ಸಾವಿರ ಅರ್ಜಿ!

ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಸವೋಚ್ಛ ನ್ಯಾಯಾಲಯದ ಆದೇಶಕ್ಕೆ ವ್ಯತಿರಿಕ್ತವಾಗಿ ಅರಣ್ಯವಾಸಿಗಳ ಅರ್ಜಿ ಪುನರ್ ಪರಿಶೀಲನೆ ನಡೆಸುತ್ತಿರುವುದಕ್ಕೆ ಅತಿಕ್ರಮಣದಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ 5 ಸಾವಿರಕ್ಕೂ ಅಧಿಕ ಅರ್ಜಿಗಳು ಸರ್ಕಾರಕ್ಕೆ ಸಲ್ಲಿಕೆಯಾಗಿದೆ!

ಶಿರಸಿ ಉಪವಿಭಾಗ ಅಧಿಕಾರಿ ಮತ್ತು ಉಪವಿಭಾಗ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷೆ ಕಾವ್ಯರಾಣಿ ಅವರ ಕಚೇರಿಗೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ನೇತೃತ್ವದಲ್ಲಿ ಅತಿಕ್ರಮಣದಾರರು ಆಕ್ಷೇಪಣಾ ಪತ್ರ ಸಲ್ಲಿಸಿದರು. ಅಪೂರ್ಣ, ಅಸ್ತಿತ್ವವಿಲ್ಲದ ಕಾನೂನುಬಾಹಿರ ಹಕ್ಕು ಸಮಿತಿಗಳು ಅರ್ಜಿ ಪರಿಶೀಲನೆ ನಡೆಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಆ ಸಮಿತಿಯಲ್ಲಿ ಶೇ 50ರಷ್ಟು ಸದಸ್ಯರ ಅನುಪಸ್ಥಿತಿಯಲ್ಲಿ ಅರ್ಜಿ ವಿಲೇವಾರಿ ಮಾಡುತ್ತಿರುವ ಬಗ್ಗೆಯೂ ಅತಿಕ್ರಮಣದಾರರು ವಿರೋಧಿಸಿದ್ದಾರೆ.

ಆಕ್ಷೇಪಣೆ ಸಲ್ಲಿಸಲು ಬರುವ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡಿದಾಗಿಯೂ ಉಪವಿಭಾಗ ಅಧಿಕಾರಿ ಕಾವ್ಯಾರಾಣಿ ಕಚೇರಿಯಲ್ಲಿರದ ಬಗ್ಗೆಯೂ ಅತಿಕ್ರಮಣದಾರರು ಆಕ್ಷೇಪಿಸಿದರು. ತಹಶೀಲ್ದಾರ್ ಆಗಮಿಸಿ ಅವರ ಮನವಿ ಆಲಿಸಿದರು. `ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಅರಣ್ಯವಾಸಿಗಳೊಂದಿಗೆ ಉಪ ವಿಭಾಗ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷರು ಹಾಗೂ ಉಪವಿಭಾಗ ಅಧಿಕಾರಿಗಳಾದ ಕಾವ್ಯ ರಾಣಿ ಅವರು ಮುಂದಿನ ಒಂದು ವಾರದಲ್ಲಿ ಮುಕ್ತವಾಗಿ ಚರ್ಚೆ ಮಾಡಲು ಬಯಸಿಲಿದ್ದಾರೆ’ ಎಂದು ತಹಶೀಲ್ದಾರ್ ಶ್ರೀಧರ ಮುಂದಲಮನೆ ತಿಳಿಸಿದರು.

ಸಂಘಟನೆಯ ಜಿಲ್ಲಾ ಸಂಚಾಲಕಾರಾದ ಇಬ್ರಾಹಿಂ ಗೌಡಳ್ಳಿ, ನೆಹರು ನಾಯ್ಕ ಬಿಳೂರು, ಕಿರಣ ಮರಾಠಿ ಯಲ್ಲಾಪುರ ಅಧ್ಯಕ್ಷ ಭೀಮಶಿ ವಾಲ್ಮಕಿ, ಮುಂಡಗೋಡ ಅಧ್ಯಕ್ಷ ಶಿವಾನಂದ ಜೋಗಿ, ಹರಿಹರ ನಾಯ್ಕ ಓಂಕಾರ್, ಸೀತರಾಮ ಗೌಡ ಹುಕ್ಕಳ್ಳಿ, ಈರಾ ಗೌಡ ನಿಲ್ಕುಂದ, ಸೀತರಾಮ ನಾಯ್ಕ ಕುಂದರಗಿ, ಅನಂತಗೌಡ ಮಾವಿನಮನೆ, ಭಾಸ್ಕರ ಗೌಡ, ಚಂದ್ರು ಪೂಜಾರಿ ಮಂಚಿಕೇರಿ, ಎಮ್ ಆರ್ ನಾಯ್ಕ, ರಾಜು ನರೇಬೈಲ್, ರಮೇಶ ಮರಾಠಿ, ಸ್ವಾತಿ ಜೈನ್, ಯಶೋಧಾ ನೌಟುರು ಒಟ್ಟಾಗಿ ಆಕ್ಷೇಪಣೆ ಸಲ್ಲಿಸಿದರು

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    You cannot copy content of this page