6

ಬಂದರು ಬಳಕೆಗೆ ಡೀಸಿ ಸೂಚನೆ: ರೈತರ ಉತ್ಪನ್ನಗಳಿಗೆ ಆನ್‌ಲೈನ್ ಮಾರುಕಟ್ಟೆ!

`ರೈತರು ಬೆಳೆಯುವ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿ ಅವುಗಳಿಗೆ ಆನ್‌ಲೈನ್ ಮಾರುಕಟ್ಟೆ ಒದಗಿಸಬೇಕು’ ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಕೃಷಿ ಹಾಗೂ ತೋಟಗಾರಿಕಾ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರೊಂದಿಗೆ `ಉತ್ತರ ಕನ್ನಡ ಜಿಲ್ಲೆಯ ಬಂದರು ವ್ಯವಸ್ಥೆಯನ್ನು ಸರಿಯಾಗಿ ಬಳಸಿಕೊಂಡು ಇಲ್ಲಿನ ಉತ್ಪನ್ನಗಳನ್ನು ಬೇರೆ ಕಡೆ ರಪ್ತು ಮಾಡುವ ಬಗ್ಗೆಯೂ ಚಿಂತಿಸಬೇಕು’ ಎಂದವರು ಸಲಹೆ ನೀಡಿದ್ದಾರೆ.

`ಉತ್ತರ ಕನ್ನಡ ಜಿಲ್ಲೆಯಲ್ಲಿ ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಒತ್ತು ನೀಡಬೇಕು. ಆ ಮೂಲಕ ರೈತರ ಉತ್ಪನ್ನಗಳಿಗೆ ಗರಿಷ್ಠ ಲಾಭ ದೊರೆಯುವಂತೆ ಮಾಡಬೇಕು. ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಕಾರ್ಯನಿರ್ವಹಿಸಬೇಕು’ ಎಂದವರು ಸೂಚಿಸಿದರು.

`ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಬೆಳೆಗಳಿಗೆ ಲಾಭ ದೊರಕಿಸುವ ಉದ್ದೇಶದಿಂದ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಈ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು. ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡುವ ವಿಧಾನಗಳ ಬಗ್ಗೆ ತರಬೇತಿ ಆಯೋಜಿಸಿ, ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆಗೆ ಬ್ಯಾಂಕ್‌ಗಳಿAದ ದೊರೆಯುವ ಸಾಲ ಮತ್ತು ಸಬ್ಸಿಡಿಗಳ ಕುರಿತು ಮಾಹಿತಿ ಒದಗಿಸಬೇಕು’ ಎಂದು ತಿಳಿಸಿದರು.

`ರೈತರು ಒಟ್ಟುಗೂಡಿ ಬೃಹತ್ ಪ್ರಮಾಣದಲ್ಲಿ ಆಹಾರ ಸಂಸ್ಕರಣಾ ಉದ್ದಿಮ ಸ್ಥಾಪನೆ ಮಾಡಲು ಪ್ರೋತ್ಸಾಹ ನೀಡಬೇಕು, ರೈತ ಉತ್ಪಾದಕ ಸಂಸ್ಥೆಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು’ ಎಂದರು.

`ಜಿಲ್ಲೆಯಲ್ಲಿನ ಬಂದರುಗಳನ್ನು ಬಳಸಿಕೊಂಡು ರೈತರ ಮೌಲ್ಯ ವರ್ಧಿತ ಉತ್ಪನ್ನಗಳನ್ನು ರಫ್ತು ಮಾಡುವ ಕುರಿತಂತೆ ಅಧಿಕಾರಿಗಳು ಗಮನಹರಿಸಬೇಕು. ರೈತರ ಉತ್ಪನ್ನಗಳನ್ನು ವೈಜ್ಞಾನಿಕ ರೀತಿಯಲ್ಲಿ ಮೌಲ್ಯ ವರ್ಧನೆ ಮಾಡುವ ಕುರಿತಂತೆ ಕೇಂದ್ರಿಯ ಆಹಾರ ತಾಂತ್ರಿಕ ಸಂಶೋಧನಾಲಯದ ವಿಜ್ಞಾನಿಗಳ ನೆರವು ಪಡೆಯಬೇಕು. ಉತ್ಪನ್ನಗಳಿಗೆ ಬ್ರಾಂಡಿoಗ್ ಮಾಡಲು ಮತ್ತು ಆನ್‌ಲೈನ್‌ನಲ್ಲಿ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಒದಗಿಸುವ ಕುರಿತು ಕಾರ್ಯೋನ್ಮೂಖರಾಗಬೇಕು’ ಎಂದು ಸೂಚಿಸಿದರು.

`ಬ್ಯಾಂಕುಗಳು ಸಣ್ಣ-ಪುಟ್ಟ ಕಾರಣ ನೀಡಿ ರೈತರ ಸಾಲದ ಅರ್ಜಿಗಳನ್ನು ತಿರಸ್ಕರಿಸದಂತೆ ನೋಡಿಕೊಳ್ಳಬೇಕು. ದಾಖಲೆ ಕೊರತೆಯಿದ್ದಲ್ಲಿ ಆ ದಾಖಲೆ ಪೂರೈಸುವಂತೆ ಮನವರಿಕೆ ಮಾಡಬೇಕು’ ಎಂದು ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    You cannot copy content of this page