6

ಪೊಲೀಸರ ಬಲೆಗೆ ಬಿದ್ದ ಮತ್ತೊಬ್ಬ ಹಸು ಕಳ್ಳ!

ಗೋ ಕಳ್ಳತನವೂ ಸೇರಿ ಹಲವು ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದ ಭಟ್ಕಳದ ಫಾರುಕ್ ಭೋಗಿಬಾಷಾ ಎಂಬಾತ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು, ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಶಿರಾಳಕೊಪ್ಪದ ಹಳ್ಳೂರುಕೇರಿಯ ಪಾರುಕ್ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿ ಕಳ್ಳತನ ನಡೆಸುತ್ತಿದ್ದ. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣವನ್ನು ಆತ ಎದುರಿಸುತ್ತಿದ್ದ. ಇದರೊಂದಿಗೆ ಸಿದ್ದಾಪುರದಲ್ಲಿ ದೇವಾಲಯ ದರೋಡೆ ಸೇರಿ ಶಿವಮೊಗ್ಗ-ಸೊರಬ ಪೊಲೀಸ್ ಠಾಣೆಗಳಲ್ಲಿಯೂ ಆತನ ವಿರುದ್ಧ ದೂರುಗಳು ದಾಖಲಾಗಿದ್ದವು.

ಈ ಫಾರುಕ್ ಕಳೆದ ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ನ್ಯಾಯಾಲಯದಿಂದ ವಾರೆಂಟ್ ಸಹ ಆಗಿತ್ತು. ಆದರೂ, ಆತ ಸಿಕ್ಕಿರಲಿಲ್ಲ. 15ಕ್ಕೂ ಅಧಿಕ ಪ್ರಕರಣಗಳು ಆತನ ಮೇಲಿರುವುದರಿಂದ ಪೊಲೀಸರು ತಂಡ ರಚಿಸಿಕೊಂಡು ಹುಡುಕಾಟ ನಡೆಸಿದ್ದರು. ಹೀಗಾಗಿ ಆತ ಇದೀಗ ಸಿಕ್ಕಿ ಬಿದ್ದಿದ್ದು, ನ್ಯಾಯಾಲಯ ಆತನ ಪ್ರಕರಣಗಳ ವಿಚಾರಣೆ ನಡೆಸಿದೆ.

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    You cannot copy content of this page