6

ಗಣಕಯಂತ್ರ ಪರೀಕ್ಷೆ: ಶಿರಸಿ – ಕುಮಟಾದಲ್ಲಿ ನಿಷೇಧಾಜ್ಞೆ!

ಫೆಬ್ರವರಿ 3ರಿಂದ ಫೆ 10ರವರೆಗೆ ಶಿರಸಿಯ ನಿಲೇಕಣಿಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಹಾಗೂ ಕುಮಟಾದ ಡಯಟ್ ಕಾಲೇಜಿನಲ್ಲಿ ಗಣಕಯಂತ್ರ ಶಿಕ್ಷಣ ಪರೀಕ್ಷೆ ನಡೆಯಲಿದೆ. ಈ ಹಿನ್ನಲೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

`ಈ ಪರೀಕ್ಷೆಗಳನ್ನು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಬೇಕಾಗಿದೆ. ಯಾವುದೇ ತರಹದ ಅವ್ಯವಹಾರ, ಕಾನೂನುಬಾಹಿರ ಚಟುವಟಿಕೆ ಹಾಗೂ ಶಾಂತತಾ ಭಂಗ ಆಗದಂತೆ ಎಚ್ಚರವಹಿಸಲು ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸಭೆ ಸಮಾರಂಭಗಳನ್ನು ನಡೆಯುತ್ತಿದ್ದಲ್ಲಿ ಧ್ವನಿವರ್ಧಕಗಳನ್ನು ತಡೆಯುವ ನಿಟ್ಟಿನಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಪರೀಕ್ಷಾ ಸಮಯದಿಂದ ಪರೀಕ್ಷಾ ಅವಧಿ ಮುಗಿಯುವವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ’ ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಹೇಳಿದ್ದಾರೆ.

ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿರುವ ಝೆರಾಕ್ಸ್ ಅಂಗಡಿ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚುವಂತೆ ಅವರು ಆದೇಶ ಹೊರಡಿಸಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ಮೊಬೈಲ್ ಫೋನಗಳು, ಸ್ಮಾರ್ಟ ವಾಚ್, ವೈರ್ ಲೆಸ್/ ಬ್ಲೂಟೂತ್, ಇಯರ್ ಹೆಡ್ ಫೋನ್ ತರುವುದನ್ನು ನಿಷೇಧಿಸಲಾಗಿದೆ.

 

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    You cannot copy content of this page