6

ತವರಿಗೆ ಬಂದ ಸೈನಿಕನಿಗೆ ಅದ್ಧೂರಿ ಸ್ವಾಗತ

25 ವರ್ಷಗಳ ಸೈನಿಕ ವೃತ್ತಿಯಿಂದ ನಿವೃತ್ತರಾದ ಕಾಶಿನಾಥ ನಾಯ್ಕ ಅವರು ಸೋಮವಾರ ತವರಿಗೆ ಮರಳಿದ್ದು, ಸಾವಿರ ಸಂಖ್ಯೆಯ ಜನ ಅವರನ್ನು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ. ಕಾಶಿನಾಥ ನಾಯ್ಕ ಅವರ ಜೊತೆ ಅವರ ಕುಟುಂಬದವರನ್ನು ಶಿರಸಿಯ ಮೆರವಣಿಗೆ ಮೂಲಕ ಸ್ವಾಗತಿಸಿದ್ದಾರೆ.

ಶಿರಸಿ ನಗರದ ನಿಲೇಕಣಿ ಗಣಪತಿ ದೇವಾಲಯದಿಂದ ಬೈಕ್ ರ‍್ಯಾಲಿ ನಡೆಯಿತು. ವಿದ್ಯಾರ್ಥಿಗಳು, ಎನ್‌ಸಿಸಿ ಸ್ವಯಂ ಸೇವಕರು ಸಹ ರ‍್ಯಾಲಿ ನಡೆಸಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಕಿರಣಕುಮಾರ ನಾಯ್ಕ, ಶಿರಸಿ ತಾಲೂಕು ದೈಹಿಕ ಶಿಕ್ಷಕರ ಸಂಘ ಅಧ್ಯಕ್ಷ ಬಿ ವಿ ಗಣೇಶ ಜಂಟಿ, ಸ್ಪಂದನಾ ಸ್ಫೋರ್ಡ್ಸ ಅಕಾಡೆಮಿ ಅಧಕ್ಷ ರವೀಂದ್ರ ನಾಯ್ಕ, ಪ್ರಮುಖರಾದ ಶ್ರೀನಿವಾಸ ನಾಯ್ಕ, ವೆಂಕಟೇಶ ನಾಯ್ಕ, ದೀಪಕ ದೋಡ್ಡುರ್, ನಾಗಭೂಷಣ ಗೌಡ ಜೊತೆ ನಿವೃತ್ತ ಸೈನಿಕ ಸಂಘದ ಅಧ್ಯಕ್ಷ ಎಂ ವಿ ಹೆಗಡೆ ಸೇರಿ ಕಾಶಿನಾಥ ನಾಯ್ಕ ಅವರನ್ನು ಬರಮಾಡಿಕೊಂಡರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಕಾಶಿನಾಥ ನಾಯ್ಕ ಅವರು `ದೇಶ ರಕ್ಷಣೆಯಲ್ಲಿ ಸೈನಿಕರ ಕೊಡುಗೆ ಅಪಾರ. ಯುವಕರು ಸೇನೆ ಸೇರಲು ಆಸಕ್ತಿವಹಿಸಬೇಕು’ ಎಂದು ಕರೆ ನೀಡಿದರು ನಗರ ಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ, ನಿವೃತ್ತ ಸೈನಿಕ ರಾಮು, ಪ್ರಮುಖರಾದ ಗಣಪತಿ ನಾಯ್ಕ, ಪ್ರದೀಪ ಶೆಟ್ಟಿ, ಜಗದೀಶ ಇತರರು ಇದ್ದರು.

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    You cannot copy content of this page