6

ಚಕ್ರಬಡ್ಡಿ: ದಾಂಡೇಲಿ ದಾಂಡಿಗರಿಬ್ಬರಿಗೆ ಜೈಲು!

ಅನಧಿಕೃತವಾಗಿ ಸಾಲ ನೀಡಿ ಬಡ್ಡಿ, ಚಕ್ರಬಡ್ಡಿ ಜೊತೆ ಮೀಟರ್ ಬಡ್ಡಿ ವಸೂಲಿ ಮಾಡುತ್ತಿದ್ದ ಇಬ್ಬರನ್ನು ದಾಂಡೇಲಿ ಪೊಲೀಸರು ಬಂಧಿಸಿದ್ದಾರೆ.

ಗಾಂಧಿನಗರದ ಕಂಜರಬಾಟಿನ ಕಿಶನ ಸುಭಾಸ ಕಂಜರಬಾಟ ಹಾಗೂ ವಿನೋದ ಸುರೇಶ ಮಿನೇಕರ ಬಡ್ಡಿ ದಂಧೆ ನಡೆಸುತ್ತಿರುವ ದೂರು ಬಂದ ಹಿನ್ನಲೆ ಪೊಲೀಸರು ತಪಾಸಣೆ ನಡೆಸಿದರು. ಆ ವೇಳೆ 2 ಖಾಲಿ ಇ-ಸ್ಟಾಂಪ್ ಪೆಪರ್, 6 ಚೆಕ್, ಬಾಂಡ್ ಪೆಪರ್ ಜೊತೆ ಕೈಗಡ ಸಾಲದ ಕರಾರು ಪತ್ರ ಸಿಕ್ಕಿವೆ.

ಬಡ್ಡಿ ವ್ಯವಹಾರವನ್ನು ಉದ್ದಿಮೆ ಮಾಡಿಕೊಂಡ ಆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಿಎಸ್‌ಐ ಅಮೀನಸಾಬ್ ಎಂ ಅತ್ತಾರ್ ಅವರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಇಬ್ಬರನ್ನು ಸದ್ಯ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ. ಇನ್ನಿಬ್ಬರ ಮನೆಯಲ್ಲಿಯೂ ಪೊಲೀಸರು ಶೋಧ ನಡೆಸಿದ್ದಾರೆ.

 

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page