6

ಶಾಲಾ ಮಕ್ಕಳಿಂದ ಯೋಗ ಸಂದೇಶ

ಕುಮಟಾ: ಪಟ್ಟಣದಲ್ಲಿ 700ಕ್ಕೂ ಅಧಿಕ ಮಕ್ಕಳು ಬೀದಿ ಬೀದಿ ಸಂಚರಿಸಿ `ಯೋಗ ಸಂದೇಶ’ ನೀಡಿದರು.
ಪಟ್ಟಣದ ಗಿಬ್ ವೃತ್ತದ ಸನಿಹದಲ್ಲಿ ಕೊಂಕಣ ಎಜುಕೇಶನ್ ಟ್ರಸ್ಟ್’ನ ಅಂಗ ಸಂಸ್ಥೆಗಳ ವಿದ್ಯಾರ್ಥಿಗಳು ನಡೆಸಿದ ವಿಶ್ವ ಯೋಗ ದಿನದ ಜಾಥಾ ಉದ್ಘಾಟಿಸಿದ ಕುಮಟಾ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ `ಯೋಗವು ಮಾನವನ ದೇಹವನ್ನು ಸದೃಢವಾಗಿಸುತ್ತದೆ. ಮಾನಸಿಕ ಆರೋಗ್ಯವನ್ನು ಹೆಚ್ಚಿಸುತ್ತದೆ. ಇದರಿಂದಾಗಿ ಉತ್ತಮ ಜೀವನ ಸಾಗಿಸಲು ಸಾಧ್ಯ” ಎಂದು ಹೇಳಿದರು. `ಯೋಗದಿಂದ ಮಧುಮೇಹ, ರಕ್ತದ ಒತ್ತಡ ಸೇರಿದಂತೆ ಹಲವು ರೋಗ ದೂರ ಮಾಡಬಹಯದು. ಯೋಗದಿಂದ ಮನಸ್ಸಿಗೆ ಸೂಕ್ತ ಪ್ರೇರಣೆ ಸಿಗುತ್ತದೆ’ ಎಂದರು.
ವಿದ್ಯಾರ್ಥಿಗಳು ಯೋಗಾಸನದ ಹಲವು ಬಂಗಿಗಳನ್ನು ಪ್ರದರ್ಶಿಸಿದರು. ಯೋಗ ಗುರು ಸೇರಿದಂತೆ ಇನ್ನಿತರರ ಛದ್ಮವೇಶಗಳು ಗಮನಸೆಳೆದವು. ಕೊಂಕಣ ಎಜುಕೇಶನ್ ಟ್ರಸ್ಟ್’ನ ಸಹ ಕಾರ್ಯದರ್ಶಿ ಶೇಷಗಿರಿ ಶಾನಭಾಗ, ವಿಶ್ವಸ್ಥರಾದ ರಾಮಕೃಷ್ಣ ಗೋಳಿ, ವಿಧಾತ್ರಿ ಅಕಾಡೆಮಿಯ ಗುರುರಾಜ ಶೆಟ್ಟಿ ಜಾಥಾದಲ್ಲಿದ್ದರು. ಮುಖ್ಯ ಶಿಕ್ಷಕಿ ಸುಮಾ ಪ್ರಭು, ಶೈಕ್ಷಣಿಕ ಸಲಹೆಗಾರ ಆರ್ ಎಚ್ ದೇಶಭಂಡಾರಿ ಇತರರು ಇದ್ದರು. ಜಿ ಎಸ್ ಬಿ ವಾಹಿನಿಯವರು ಪಾನೀಯ ಹಂಚಿದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page