6

ಬಸ್ಸು-ಟೆಂಪೋ ಮುಖಾಮುಖಿ: ಹಲವರಿಗೆ ಗಾಯ

ಮುಂಡಗೋಡಿನ ಮೈನಳ್ಳಿ ಬಳಿ ಬಸ್ಸು ಹಾಗೂ ಟೆಂಪೋ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಮುಂಡಗೋಡು ಹಾಗೂ ಯಲ್ಲಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಯಲ್ಲಾಪುರದಿಂದ ಮುಂಡಗೋಡು ಮಾರ್ಗವಾಗಿ ಭಾನುವಾರ ಬಸ್ಸು ಸಂಚರಿಸುತ್ತಿತ್ತು. ಎದುರಿನಿಂದ ಬರುತ್ತಿದ್ದ ಟೆಂಪೋ ಬಸ್ಸಿಗೆ ಡಿಕ್ಕಿಯಾಯಿತು. ಈ ಅಪಘಾತದಿಂದ ಎರಡು ವಾಹನ ಚಾಲಕರಿಗೂ ಅಲ್ಲಲ್ಲಿ ಗಾಯವಾಗಿದೆ. ಟೆಂಪೋದಲ್ಲಿದ್ದ ಪ್ರಯಾಣಿಕರು ಹೆಚ್ಚಿನ ಪ್ರಮಾಣದಲ್ಲಿ ಗಾಯಗೊಂಡಿದ್ದಾರೆ.

ಮಹಾಲಕ್ಷ್ಮಿ ಗೌಡ, ಶಶಾಂಕ ಗೌಡ, ನಾಗವೇಣಿ ಗೌಡ, ಕೃಷ್ಣಲಿಂಗ ಗೌಡ, ಜಯಶ್ರೀ ಗೌಡ, ಗೌರಿ ಗೌಡ ಎಂಬಾತರು ಮುಂಡಗೋಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಇನ್ನೂ ಕೆಲವರನ್ನು ಯಲ್ಲಾಪುರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page