6

ಸರ್ಕಾರಿ ಜಾಗದಲ್ಲಿ ಅತಿಕ್ರಮಣದಾರರ ಮನೆ: ದಿಢೀರ್ ಕಾರ್ಯಾಚರಣೆಯಿಂದ ಎಲ್ಲವೂ ನೆಲಸಮ!

ದಾಂಡೇಲಿಯ ಸರ್ಕಾರಿ ಜಾಗ ಅತಿಕ್ರಮಿಸಿ ಮನೆ ನಿರ್ಮಿಸಿಕೊಂಡವರಿಗೆ ನಗರಸಭೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಶನಿವಾರ ಅಕ್ರಮ ಮನೆ, ಶೆಡ್ಡು ಹಾಗೂ ಕಪೌಂಡ್‌ಗಳನ್ನು ನಗರಸಭೆ ಸಿಬ್ಬಂದಿ ಧ್ವಂಸ ಮಾಡಿದ್ದಾರೆ.

ದಾಂಡೇಲಿ ನಗರದ ಅಂಬೇವಾಡಿಯ ಜಿ+2 ಆಶ್ರಯ ಕಾಲೋನಿ ಬಳಿ ಅನೇಕರು ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದರು. ಶನಿವಾರ ಅಲ್ಲಿ ದಾಳಿ ನಡೆಸಿದ ನಗರಸಭೆಯವರು 22 ಮನೆಗಳನ್ನು ತೆರವು ಮಾಡಿದರು. ಬೆಳಗ್ಗೆ 7 ಗಂಟೆಗೆ ಅಧಿಕಾರಿ-ಸಿಬ್ಬಂದಿ ಆಗಮಿಸಿ ತೆರವು ಕಾರ್ಯಾಚರಣೆ ನಡೆಸಿದರು.

`ಸರ್ಕಾರಿ ಜಾಗ ಅತಿಕ್ರಮಿಸುವುದು ಅಪರಾಧ’ ಎಂದು ಈ ಹಿಂದೆಯೇ ನಗರಸಭೆಯವರು ಹೇಳಿದ್ದರು. ಆದರೂ, ಅತಿಕ್ರಮಣದಾರರು ಈ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ. ಆ ಜಾಗವನ್ನು ಸಹ ತೆರವು ಮಾಡಿರಲಿಲ್ಲ. ಹೀಗಾಗಿ ನಗರಸಭೆಯವರು ಶನಿವಾರ ಕಾರ್ಯಾಚರಣೆ ನಡೆಸಿ ಅತಿಕ್ರಮಣ ತೆರವು ಮಾಡಿದರು.

ನಗರಸಭೆಯ ಪೌರಾಯುಕ್ತ ವಿವೇಕ ಬನ್ನೆ ಸೂಚನೆ ಪ್ರಕಾರ ಪೌರಾಯುಕ್ತರು ಹಾಗೂ ಸಿಬ್ಬಂದಿ ಕಾರ್ಯಾಚರಣೆಗಿಳಿದಿದ್ದರು. ನಗರಸಭೆಯ ವ್ಯಸ್ತಾಪಕ ಪರಶುರಾಮ ಸಿಂದೆ, ನಗರಸಭೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ನಾಗೇಂದ್ರ ದೊಡ್ಡಮನಿ, ಸಿಬ್ಬಂದಿ ಶುಭಂ ರಾಯ್ಕರ ಸ್ಥಳಕ್ಕೆ ಭೇಟಿ ನೀಡಿದರು

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page