6

ಎಲ್ಲೆಂದರಲ್ಲಿ ತ್ಯಾಜ್ಯ: ಜಿಲ್ಲಾಧಿಕಾರಿ ಆದೇಶಕ್ಕೆ ಇಲ್ಲ ಬೆಲೆ!

`ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವವರಿಗೆ ದಂಡ ವಿಧಿಸಿ, ಪೊಲೀಸ್ ಪ್ರಕರಣ ದಾಖಲಿಸಿ’ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ  ಲಕ್ಷ್ಮೀಪ್ರಿಯಾ ಅಧೀನ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಆದರೆ, ಈ ಆದೇಶ ಕಿಂಚಿತ್ತು ಪಾಲನೆ ಆಗುತ್ತಿಲ್ಲ!

ಕುಮಟಾದ ಆಳ್ವೆಕೊಡಿ ಬಳಿಯ ಹೊನ್ಮವ ರಾಜ್ಯ ಹೆದ್ದಾರಿ ಪಕ್ಕ ಭಾನುವಾರ ಭಾರೀ ಪ್ರಮಾಣದ ತ್ಯಾಜ್ಯ ಬಿದ್ದಿದೆ. ಪರಿಣಾಮ ಮೀನು ಮಾರುಕಟ್ಟೆ ತಿರುವು ಪ್ರದೇಶ ಗಬ್ಬೆದ್ದಿದೆ. ನಿತ್ಯ ಈ ಮಾರ್ಗದಲ್ಲಿ ಪುರಸಭೆ ವಾಹನ ಸಂಚರಿಸಿದರೂ ತ್ಯಾಜ್ಯ ನಿರ್ವಹಣೆ ಬಗ್ಗೆ ಯಾರಿಗೂ ಕಾಳಜಿ ಇಲ್ಲ.

ಅನುದಿನವೂ ಇಲ್ಲಿ ಅನೇಕರು ಆಗಮಿಸಿ ತ್ಯಾಜ್ಯ ಎಸೆಯುತ್ತಿದ್ದಾರೆ. ಬೀಡಾಡಿ ದನಗಳು ಅಲ್ಲಿನ ಪ್ಲಾಸ್ಟಿಕ್ ಸೇವಿಸಿ ಅನಾರೋಗ್ಯಕ್ಕೊಳಗಾಗುತ್ತಿವೆ. ಗಬ್ಬೆದ್ದ ಕೋಳಿ ತ್ಯಾಜ್ಯ ಬೀದಿ ನಾಯಿಗಳ ಪಾಲಾಗುತ್ತಿದೆ. ರಸ್ತೆ ದಾಟುವ ವೇಳೆ ಜಾನುವಾರುಗಳಿಗೆ ವಾಹನ ಗುದ್ದುವುದು ಇಲ್ಲಿನ ಸಾಮಾನ್ಯ ಸನ್ನಿವೇಶ.

ಈ ಭಾಗದಲ್ಲಿ ದಯಾ ನಿಲಯ ಎಂಬ ಬುದ್ದಿಮಾಂದ್ಯ ವಸತಿ ಶಾಲೆಯೂ ಇದೆ. ಅಕ್ಕ-ಪಕ್ಕದ ಪ್ರದೇಶಗಳಲ್ಲಿ ಸಾಕಷ್ಟು ಮನೆಗಳಿವೆ. ವಿಪರೀತ ತ್ಯಾಜ್ಯದಿಂದ ರೋಗ ಹರಡುವ ಆತಂಕ ಹೆಚ್ಚಾಗಿದೆ. ಅದಾಗಿಯೂ ಪುರಸಭೆ ಸ್ವಚ್ಛತೆ ಬಗ್ಗೆ ಗಮನಹರಿಸುತ್ತಿಲ್ಲ.

`ಈ ಭಾಗದಲ್ಲಿ ತ್ಯಾಜ್ಯ ಎಸೆಯುವವರ ವಿರುದ್ಧ ಕಠಿಣ ಕ್ರಮವಾಗಬೇಕು. ತ್ಯಾಜ್ಯ ಎಸೆಯುವವರ ಪತ್ತೆಗೆ ಸಿಸಿ ಕ್ಯಾಮರಾ ಅಳವಡಿಸಬೇಕು. ಕೂಡಲೇ ಸ್ವಚ್ಛತೆಗೆ ಆದ್ಯತೆ ಕೊಡಬೇಕು’ ಎಂದು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರ ಆಗ್ರಹಿಸಿದೆ. ಒಂದು ವಾರದೊಳಗೆ ಯಾವುದೇ ಕ್ರಮವಾಗದೇ ಇದ್ದರೆ ಪ್ರತಿಭಟನೆ ನಡೆಸುವುದಾಗಿಯೂ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗಸ್, ಸುಧಾಕರ ನಾಯ್ಕ ಹಾಗೂ ಶಿವು ಮುಕ್ರಿ ಎಚ್ಚರಿಸಿದ್ದಾರೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page