6

ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ನ್ಯಾಯವಾದಿಯ ಕಿವಿಮಾತು

ಕಾರವಾರದ ಅಸ್ನೋಟಿಯ ಶಿವಾಜಿ ವಿದ್ಯಾಮಂದಿರದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಲೇಖನಿ ಹಾಗೂ ಪರೀಕ್ಷಾ ಪ್ರವೇಶ ಪತ್ರ ವಿತರಿಸಿದ ನ್ಯಾಯವಾದಿ ಸಂಜಯ ಸಾಳುಂಕೆ `ಉತ್ತಮ ನಡೆ-ನುಡಿ ರೂಢಿಸಿಕೊಂಡು ಒಳ್ಳೆಯ ಪ್ರಜೆಗಳಾಗಿ ಹೊರಹೊಮ್ಮಿ’ ಎಂದು ಕಿವಿಮಾತು ಹೇಳಿದರು.

`ವಿದ್ಯಾರ್ಥಿ ಜೀವನ ಅಮೂಲ್ಯವಾಗಿದೆ. ಅದರಲ್ಲಿಯೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎಂಬುದು ವಿದ್ಯಾರ್ಥಿಗಳ ಪಾಲಿಗೆ ಮಹತ್ವದ ಘಟ್ಟ. ಆತ್ಮವಿಶ್ವಾಸದೊಂದಿಗೆ ಪರೀಕ್ಷೆ ಎದುರಿಸಿ. ಗೆಲುವು ಸಾಧಿಸಿ’ ಎಂದು ಅವರು ಕರೆ ನೀಡಿದರು. `ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧೆ ಅನಿವಾರ್ಯ. ಪ್ರತಿ ಮಕ್ಕಳು ದಿಟ್ಟ ಹೆಜ್ಜೆಗಳನ್ನು ಮೂಡಿಸಿ ಶಾಲೆಯ ಕೀರ್ತಿ ಹೆಚ್ಚಿಸಬೇಕು’ ಎಂದು ಅವರು ಸ್ಪೂರ್ತಿ ತುಂಬಿದರು.

ಮುಖ್ಯಾಧ್ಯಾಪಕರಾದ ದಿನೇಶ ಗಾಂವಕರ್ ಮಾತನಾಡಿ `ಕಷ್ಟ-ನಷ್ಟ ಏನೇ ಬರಲಿ. ತಮ್ಮ ಓದು ಯಶಸ್ಸಿಗಾಗಿ ದಾರಿಯಾಗಲಿ’ ಎಂದು ಶುಭಕೋರಿದರು. ಶಿಕ್ಷಕರಾದ ಗಣೇಶ ಬಿಷ್ಟಣ್ಣನವರ, ವಿಜಯಕುಮಾರ ನಾಯ್ಕ್, ಶರತ್ ಗಾಂವಕರ್, ಸಂತೋಷ ಕಾಂಬ್ಳೆ, ಜೆ ಬಿ ತಿಪ್ಪೇಸ್ವಾಮಿ, ರೂಪಾಲಿ ಸಾವಂತ ಹಾಗೂ ಮಹಾದೇವ ಅಸ್ನೋಟಿಕರ್ ವೇದಿಕೆಯಲ್ಲಿದ್ದರು. ಅವರೆಲ್ಲರೂ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಗೆ ಶುಭ ಕೋರಿದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page