6

ಅರಣ್ಯ ನ್ಯಾಯಕ್ಕೆ ರವೀಂದ್ರರ ಅಭಯ

ಶಿರಸಿ: ಅರಣ್ಯವಾಸಿಗಳ ಸಮಸ್ಯೆಗಳ ಸ್ಪಂಧಿಸುವ ಹಿನ್ನಲೆಯಲ್ಲಿ ಜೂ 25ರಂದು ಮುಂಜಾನೆ 10.30 ಕ್ಕೆ ಶಿರಸಿಯಲ್ಲಿ `ಅರಣ್ಯವಾಸಿಗಳ ಸಮಸ್ಯೆಗಳ ಅದಾಲತ್’ ಸಂಘಟಿಸುವ ಮೂಲಕ ಅರಣ್ಯವಾಸಿಗಳು ಅರಣ್ಯ ಇಲಾಖೆಗೆ ಸಮಸ್ಯೆಗಳನ್ನು ಮಂಡಿಸಲಾಗುವುದು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.
`ಜಿಲ್ಲಾದ್ಯಂತ ಅರಣ್ಯವಾಸಿಗಳ ಸಾಗುವಳಿಯ ಸಂದರ್ಭದಲ್ಲಿ ಉಂಟಾಗುತ್ತಿರುವ ಅನಾನೂಕುಲತೆ, ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಮಂಜೂರಿ ಪ್ರಕ್ರಿಯೆ ಸಂದರ್ಭದಲ್ಲಿ ಅರಣ್ಯವಾಸಿಗಳ ಸಾಗುವಳಿಗೆಗೆ ಉಂಟಾಗುತ್ತಿರುವ ಸಮಸ್ಯೆ ಹಾಗೂ ಜಿ.ಪಿ.ಎಸ್. ಮಾನದಂಡದಿoದ ಉಂಟಾಗುತ್ತಿರುವ ಕಾನೂನಾತ್ಮಕ ಸಮಸ್ಯೆಗಳ ಕುರಿತು ಚರ್ಚಿಸಲಾಗುತ್ತದೆ. ಅರಣ್ಯ ಇಲಾಖೆಯ ಅರಣ್ಯವಾಸಿಗಳ ಸಮಸ್ಯೆಗಳನ್ನ ಗಮನಕ್ಕೆ ತರುವ ಉದ್ದೇಶದಿಂದ ಅದಾಲತ್ ಸಂಘಟಿಸಲಾಗಿದೆ’ ಎಂದು ಅವರು ಹೇಳಿದರು. `ಅದಾಲತ್ ಕಾರ್ಯಕ್ರಮದಲ್ಲಿ ಹಿರಿಯ ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದು, ಅರಣ್ಯವಾಸಿಗಳ ಸಮಸ್ಯೆಗಳಿಗೆ ಅದಾಲತ್‌ನಲ್ಲಿ ಸ್ಪಂದಿಸಲಿದ್ದಾರೆ’ ಎಂದವರು ಹೇಳಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page