6

ಮರಿ ರೌಡಿಗಳ ಅಟ್ಟಹಾಸ: ಬೀದಿ ಹೆಣವಾದ ರಾಜಕೀಯ ಪುಡಾರಿ!

ಕಾರವಾರ ನಗರಸಭೆ ಮಾಜಿ ಸದಸ್ಯ ಸತೀಶ ಕೋಳಂಕರ್ ಅವರ ಕೊಲೆಯಾಗಿದೆ. ಭಾನುವಾರ ಬೆಳಗ್ಗೆ ವಾಕಿಂಗ್ ಹೊರಟಿದ್ದ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ಸತೀಶ ಕೋಳಂಕರ್ ವಿರುದ್ಧ 8ಕ್ಕೂ ಅಧಿಕ ಪೊಲೀಸ್ ಪ್ರಕರಣಗಳಿದ್ದವು. ಹೀಗಾಗಿ ಅವರನ್ನು ಪೊಲೀಸರು ಸಹ ರೌಡಿ ಶೀಟರ್ ಎಂದು ಗುರುತಿಸಿದ್ದರು. ಕೆಲ ದಿನಗಳ ಹಿಂದೆ ಹಣಕಾಸಿನ ವಿಷಯವಾಗಿ ಸತೀಶ್ ಕೋಳಂಕರ್ ಮೇಲೆ ಹಲ್ಲೆಯ ಪ್ರಯತ್ನ ನಡೆದಿತ್ತು. ಇದೇ ಮುಂದುವರೆದ ಭಾಗವಾಗಿ ಕೊಲೆ ನಡೆದ ಅನುಮಾನಗಳಿವೆ.

ಭಾನುವಾರ ಬೆಳಗ್ಗೆ ಸತೀಶ ಕೋಳಂಕರ್ ವಾಯು ವಿಹಾರಕ್ಕೆ ಬಂದಿದ್ದರು. ಮರಳಿ ಮನೆಗೆ ಹೋಗುವಾಗ ಇಬ್ಬರು ಅವರನ್ನು ಅಡ್ಡಗಟ್ಟಿದರು. ಮೊದಲು ಹಲ್ಲೆ ನಡೆಸಿ ನಂತರ ಚಾಕುವಿನಿಂದ ದಾಳಿ ಮಾಡಿದರು. ಸಂತೆ ಮಾರುಕಟ್ಟೆಯಲ್ಲಿ ಬಿದ್ದು ಹೊರಳಾಡುತ್ತಿದ್ದ ಅವರನ್ನು ಆಸ್ಪತ್ರೆಗೆ ಸೇರಿಸುವ ಮುನ್ನವೇ ಸಾವನಪ್ಪಿದರು. ಈ ಬಗ್ಗೆ ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರು ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು ಖಚಿತಪಡಿಸಿದ್ದಾರೆ.

ಸತೀಶ ಕೋಳಂಕರ್ ಅವರು 62ನೇ ವಯಸ್ಸಿನಲ್ಲಿದ್ದರು. ಎರಡು ಬಾರಿ ನಗರಸಭೆ ಸದಸ್ಯರಾಗಿದ್ದರು. ಸದ್ಯ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿದ್ದರು. `ಹಂತಕರ ಬಗ್ಗೆ ಸುಳಿವು ಸಿಕ್ಕಿದೆ. ಅವರ ಬಂಧನಕ್ಕಾಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ನೇತ್ರತ್ವದಲ್ಲಿ ತಂಡ ರಚಿಸಲಾಗಿದೆ’ ಎಂದು ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರು ಮಾಹಿತಿ ನೀಡಿದ್ದಾರೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page