6

ಕೈಗಾ: ಅಡುಗೆ ಕೆಲಸದವನ ಆಕಸ್ಮಿಕ ಮರಣ!

ಕಾರವಾರದ ಕೈಗಾ ಅಣು ವಿದ್ಯುತ್ ಘಟಕದ 5 ಮತ್ತು 6ನೇ ಕ್ಯಾಂಟಿನ್’ನಲ್ಲಿ ಅಡುಗೆ ಕೆಲಸ ಮಾಡುವ ವಿಜ್ರೇಶ್ ಅವದ್ ಏಕಾಏಕಿ ಕುಸಿದು ಬಿದ್ದು ಸಾವನಪ್ಪಿದ್ದಾರೆ.

ಉತ್ತರ ಪ್ರದೇಶದ ವಿಜ್ರೇಶ್ ಅವದ್ ಅವರು 15 ಕಾರ್ಮಿಕರ ಜೊತೆ ಶುಕ್ರವಾರ ಕೆಲಸ ಮಾಡುತ್ತಿದ್ದರು. ಬೆಳಗ್ಗೆ 7 ಗಂಟೆ ಅವಧಿಗೆ ಅಡುಗೆ ಕೋಣೆಯಿಂದ ಸ್ಟೋರ್ ರೂಮಿಗೆ ತೆರಳಿದ ಅವರು ಅಲ್ಲಿಯೇ ಕುಸಿದು ಬಿದ್ದರು. ಉಳಿದ ಕಾರ್ಮಿಕರು ಅವರನ್ನು ಎಬ್ಬಿಸುವ ಪ್ರಯತ್ನ ಮಾಡಿದರು. ಆದರೆ, ವಿಜ್ರೇಶ್ ಅವದ್ ಮಾತನಾಡುವ ಸ್ಥಿತಿಯಲ್ಲಿರಲಿಲ್ಲ.

ಎಲ್ಲರೂ ಸೇರಿ ವಿಜ್ರೇಶ್ ಅವರನ್ನು ಕೈಗಾ ಟೌನ್‌ಶಿಪ್ ಆಸ್ಪತ್ರೆಗೆ ಕರೆತಂದರು. ಅಲ್ಲಿನ ವೈದ್ಯರು ವಿಜ್ರೇಶ್ ಅವರು ಈಗಾಗಲೇ ಸಾವನಪ್ಪಿದ ಬಗ್ಗೆ ಘೋಷಿಸಿದರು. ಈ ಬಗ್ಗೆ ಮಲ್ಲಾಪುರ ಪೊಲೀಸ್ ಠಾಣೆಯಲ್ಲಿ ಕೈಗಾದ ಕಾರ್ಮಿಕ ರಾಕೇಶ್ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page