6

ಯಲ್ಲಾಪುರದ ಕರ್ಣಾಟಕ ಬ್ಯಾಂಕಿಗೆ 13ರ ಹರೆಯ

100 ವರ್ಷಗಳನ್ನು ಪೂರೈಸಿರುವ ಕರ್ಣಾಟಕ ಬ್ಯಾಂಕ್ ಯಲ್ಲಾಪುರದಲ್ಲಿ ಶಾಖೆ ತೆರೆದು ಇಂದು (ಜೂ 24) 13 ವರ್ಷ ಕಳೆದಿದೆ. ಈ ಹಿನ್ನಲೆ ಬ್ಯಾಂಕಿನಲ್ಲಿ ಸಂಭ್ರಮದ ವಾತಾವರಣ ಕಂಡುಬoದಿತು. ದಶಕದ ಹಿಂದೆ `ಡ್ರೀಮ್ ಲಾಜಿಸ್ಟಿಕ್ ಕಂಪನಿ’ಯ ಕಟ್ಟಡದಲ್ಲಿ ಸೇವೆ ಶುರು ಮಾಡಿದ ಈ ಬ್ಯಾಂಕ್ ಇಂದಿಗೂ ಅಲ್ಲಿಯೇ ಸೇವೆ ಮುಂದುವರೆಸಿದ್ದು, ಶಾಸಕ ಶಿವರಾಮ ಹೆಬ್ಬಾರ್ ಅವರ ಒಡೆತನದ ಕಟ್ಟಡ ಇದಾಗಿದೆ. ಕಳೆದ ವರ್ಷದಿಂದ ಅದೇ ಕಟ್ಟಡದಲ್ಲಿ ಎಟಿಎಂ ಸೇವೆ ಸಹ ಸಿಗುತ್ತಿದೆ.
ಶಾಸಕ ಶಿವರಾಮ ಹೆಬ್ಬಾರ್ ಅವರು ದೀಪ ಬೆಳಗಿಸುವುದರ ಮೂಲಕ 13ನೇ ವರ್ಷದ ವಾರ್ಷಿಕ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬ್ಯಾಂಕಿನ ಸೇವೆಯ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ ಬ್ಯಾಂಕಿನ ಹಿರಿಯ ಅಧಿಕಾರಿಗಳು ಹಾಗೂ ಗ್ರಾಹಕರು ಇದ್ದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page