6

ಮೇ 29: ಶಾಲೆಗೆ ರಜೆ ಇಲ್ಲ.. ಮಕ್ಕಳು ಬರಬೇಕಿಲ್ಲ!

ಮಳೆ ಮುಂದುವರೆದ ಕಾರಣ ಮೇ 29ರಂದು ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಆದೇಶಿಸಿದ್ದಾರೆ. ಆದರೆ, ಶಾಲೆಗಳಿಗೆ ಈ ರಜೆ ಇಲ್ಲ. ಅದಾಗಿಯೂ ಮಕ್ಕಳು ಶಾಲೆಗೆ ಬರಬೇಕಾಗಿಲ್ಲ!

ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಕಾರಣ ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ ಘೋಷಣೆಯಾಗಿದೆ. ಈ ಹಿನ್ನಲೆ ಅಂಗನವಾಡಿಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಆದರೆ, ಮೇ 29ರಿಂದ ಶಾಲೆಗಳು ಶುರುವಾಗಲಿದ್ದು, ಶಾಲೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿಲ್ಲ. ಹೀಗಾಗಿ ಮಕ್ಕಳನ್ನು ಶಾಲೆಗೆ ಕಳುಹಿಸಬೇಕಾ? ಬೇಡವಾ? ಎಂಬ ಗೊಂದಲ ಪಾಲಕರನ್ನು ಕಾಡುತ್ತಿದೆ.

ಈ ಬಗ್ಗೆ ಮಾಹಿತಿ ನೀಡಿದ ಕಾರವಾರ ಹಾಗೂ ಶಿರಸಿಯ ಶಿಕ್ಷಣ ಇಲಾಖೆ ಉಪನಿರ್ದೇಶಕರು `ಮೇ 29ರಿಂದ ಶಾಲೆ ಶುರುವಾಗುವುದು ಸತ್ಯವಾದರೂ ಆ ದಿನ ಶಿಕ್ಷಕರಿಗೆ ಮಾತ್ರ ಬರಲು ಸೂಚಿಸಲಾಗಿದೆ. ಮಕ್ಕಳು ಬರುವ ಅಗತ್ಯವಿಲ್ಲ’ ಎಂದು ಹೇಳಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶಿಕ್ಷಕರು-ಮುಖ್ಯ ಶಿಕ್ಷಕರು ಹಾಗೂ ಶಾಲಾ ಎಸ್‌ಡಿಎಂಸಿಯವರು ಮೇ 29ರಂದು ಆಗಮಿಸಿ ಶಾಲೆ ಶುರುವಿಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಲಿದ್ದಾರೆ. ಮೇ 30ರಂದು ಮಳೆ ರಜೆ ಘೋಷಣೆ ಆಗದೇ ಇದ್ದರೆ ಅಂದಿನಿ0ದ ಪ್ರಾಥಮಿಕ ಶಾಲೆಗಳು ಶುರುವಾಗಲಿದೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page